ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ಇಂದು ಸಂಜೆ ಕಾಂಗ್ರೆಸ್ ತುರ್ತು ಸಭೆ

ಕಾಂಗ್ರೆಸ್ ತನ್ನ ಸ್ಟೀರಿಂಗ್ ಕಮಿಟಿ ಸದಸ್ಯರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಮತ್ತು ಮುಂಚೂಣಿ ಘಟಕಗಳ ಮುಖ್ಯಸ್ಥರ ಸಭೆಯನ್ನು ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ  ರಾಷ್ಟ್ರ ರಾಜಧಾನಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ. 
ಕಾಂಗ್ರೆಸ್ ಮುಖಂಡರ ಸಭೆಯ ಸಾಂದರ್ಭಿಕ ಚಿತ್ರ
ಕಾಂಗ್ರೆಸ್ ಮುಖಂಡರ ಸಭೆಯ ಸಾಂದರ್ಭಿಕ ಚಿತ್ರ

ನವದೆಹಲಿ: ಕಾಂಗ್ರೆಸ್ ಸ್ಟೀರಿಂಗ್  ಕಮಿಟಿ ಸದಸ್ಯರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಮತ್ತು ಮುಂಚೂಣಿ ಘಟಕಗಳ ಮುಖ್ಯಸ್ಥರ ಸಭೆಯನ್ನು ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ  ರಾಷ್ಟ್ರ ರಾಜಧಾನಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ. 

ಮಾನನಷ್ಟ ಮೊಕದ್ದಮೆಯಲ್ಲಿ  ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿ 2 ವರ್ಷ ಜೈಲು ಶಿಕ್ಷೆಗೆ ಗುರಿಪಡಿಸಿದ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷ ಇಂದು ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ. ಈ ವಿಚಾರವಾಗಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನುು ಇತರ ಪಕ್ಷಗಳೊಂದಿಗೆ ಭೇಟಿ ಮಾಡುವುದಾಗಿ ಪಕ್ಷ ತಿಳಿಸಿದೆ.

ಎರಡನೇ ಹಂತದ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವ ನಿರೀಕ್ಷೆಯಿದೆ. ಪಕ್ಷದ ಸಂಸದ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ತೀರ್ಪಿನ ವಿರುದ್ಧ ಪ್ರತಿಭಟನಾ ಮೆರವಣಿಗೆಗೆ ಕಾಂಗ್ರೆಸ್ ಕರೆ ನೀಡಿದ ನಂತರ ವಿಜಯ್ ಚೌಕ್‌ನಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.  

"ಮುಖ್ಯ ಸಮಸ್ಯೆಯನ್ನು ಬದಿಗೊತ್ತಲು ಬಿಜೆಪಿ ಈ ರೀತಿ ಮಾಡುತ್ತಿದೆ. ಕಾಂಗ್ರೆಸ್ ಯಾವಾಗಲೂ ಒಬಿಸಿ, ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಪರವಾಗಿ ನಿಂತಿದೆ ಮತ್ತು ಅವರಿಗಾಗಿ ಹೋರಾಡಿದೆ ಎಂದು ಖರ್ಗೆ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com