ರಾಹುಲ್ ಗಾಂಧಿಗೆ ಜೈಲು ಶಿಕ್ಷೆ: ಪ್ರತಿಪಕ್ಷ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಪ್ರತಿಪಕ್ಷ ನಾಯಕರೊಂದಿಗೆ ಸಭೆ ನಡೆಸಿದರು ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು.
Published: 24th March 2023 11:53 AM | Last Updated: 24th March 2023 06:06 PM | A+A A-

ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಪ್ರತಿಪಕ್ಷ ನಾಯಕರೊಂದಿಗೆ ಸಭೆ ನಡೆಸಿದರು ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು.
ಕಾಂಗ್ರೆಸ್ ಅಲ್ಲದೆ, ಡಿಎಂಕೆ, ನ್ಯಾಷನಲ್ ಕಾನ್ಫರೆನ್ಸ್, ಆರ್‌ಎಸ್‌ಪಿ, ವಿಸಿಕೆ, ಜೆಡಿಯು, ಸಿಪಿಐ(ಎಂ), ಎಸ್‌ಪಿ, ಎಸ್‌ಎಸ್, ಐಯುಎಂಎಲ್, ಎಎಪಿ ಮತ್ತು ಸಿಪಿಐ ಮುಂತಾದ ಪಕ್ಷಗಳ ಹಿರಿಯ ನಾಯಕರು ಸಂಸತ್ತಿನ ಸಂಕೀರ್ಣದ ಒಳಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.
ವಿರೋಧ ಪಕ್ಷಗಳು ಶುಕ್ರವಾರ ಮಧ್ಯಾಹ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಲು ಸಮಯ ಕೇಳಿವೆ.
ರಾಹುಲ್ ಗಾಂಧಿ ಅವರ 'ಮೋದಿ ಉಪನಾಮ' ಕುರಿತಾದ ಟೀಕೆಗಳ ವಿರುದ್ಧ ದಾಖಲಾದ ಪ್ರಕರಣದಲ್ಲಿ ಸೂರತ್‌ನ ನ್ಯಾಯಾಲಯವು ಗುರುವಾರ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದೆ ಮತ್ತು ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲು 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, 'ಇದು ಕೇವಲ ಕಾನೂನು ಸಮಸ್ಯೆಯಲ್ಲ, ದೇಶದ ಪ್ರಜಾಪ್ರಭುತ್ವದ ಭವಿಷ್ಯದೊಂದಿಗೆ ಸಂಬಂಧಿಸಿದ ಗಂಭೀರ ರಾಜಕೀಯ ವಿಷಯವಾಗಿದೆ' ಎಂದು ಗುರುವಾರ ಹೇಳಿದರು.
ಇದನ್ನೂ ಓದಿ: 'ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ' ಎಂದಿದ್ದ ರಾಹುಲ್ ಗಾಂಧಿ ದೋಷಿ; ಸೂರತ್ ನ್ಯಾಯಾಲಯ ತೀರ್ಪು, 2 ವರ್ಷ ಜೈಲು ಶಿಕ್ಷೆ
ಮೋದಿ ಸರ್ಕಾರದ ಸೇಡಿನ, ಬೆದರಿಕೆ ರಾಜಕೀಯಕ್ಕೆ ಇದು ಮತ್ತೊಂದು ಪ್ರಮುಖ ಉದಾಹರಣೆಯಾಗಿದೆ. ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಹೋರಾಟ ಮಾಡುತ್ತೇವೆ. ಅಂತಹ ರಾಜಕೀಯಕ್ಕೆ ನಾವು ತಲೆಬಾಗುವುದಿಲ್ಲ ಅಥವಾ ಹೆದರುವುದಿಲ್ಲ ಮತ್ತು ಇದನ್ನು ಪ್ರಮುಖ ರಾಜಕೀಯ ವಿಷಯವಾಗಿ ಪರಿವರ್ತಿಸುತ್ತೇವೆ ಎಂದು ಅವರು ಹೇಳಿದರು.