ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಮುಕ್ತಾಯಗೊಳಿಸಿದ...
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಮುಕ್ತಾಯಗೊಳಿಸಿದ ದೆಹಲಿ ನ್ಯಾಯಾಲಯ, ಮಾರ್ಚ್ 31ಕ್ಕೆ ತೀರ್ಪು ಕಾಯ್ದಿರಿಸಿದೆ.

ಪ್ರಕರಣದಲ್ಲಿ ತನ್ನ ವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಕಿರು ಟಿಪ್ಪಣಿಯನ್ನು ಹಸ್ತಾಂತರಿಸಿದ ನಂತರ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ನಿಯಮಿತ ಜಾಮೀನು ನೀಡುವ ಕುರಿತು ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.

ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ, ಅವರು 'ಹಿಂದೆಂದೂ ಕಂಡಿಲ್ಲದ' 18 ಸಚಿವಾಲಯಗಳೊಂದಿಗೆ ವ್ಯವಹರಿಸಿದ್ದಾರೆ ಮತ್ತು ಅವರು ವಿದೇಶಕ್ಕೆ ತೆರಳುವುದಿಲ್ಲವಾದರೂ, ಅವರು ಖಂಡಿತವಾಗಿಯೂ ಸಾಕ್ಷ್ಯ ನಾಶದ ಅಪಾಯವನ್ನು ಹೊಂದಿದ್ದಾರೆ ಎಂದು ಹೇಳಿದೆ.

ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com