ಅದಾನಿ ಗ್ರೂಪ್‌ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ: ರಾಷ್ಟ್ರಪತಿ ಭವನಕ್ಕೆ ಪ್ರತಿಪಕ್ಷಗಳ ಮೆರವಣಿಗೆ, ಹಲವು ನಾಯಕರು ಪೊಲೀಸರ ವಶಕ್ಕೆ

ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರಪತಿ ಭವನದತ್ತ ಶುಕ್ರವಾರ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಪ್ರತಿಪಕ್ಷಗಳ ನಾಯಕರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು.
ಪ್ರತಿಪಕ್ಷಗಳ ನಾಯಕರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು.

ನವದೆಹಲಿ: ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರಪತಿ ಭವನದತ್ತ ಶುಕ್ರವಾರ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಪ್ರತಿಪಕ್ಷಗಳ ನಾಯಕರು ತಮ್ಮ ಗಮ್ಯಸ್ಥಾನವನ್ನು ತಲುಪದಂತೆ ತಡೆಯುವ ಪ್ರಯತ್ನವಾಗಿ ಭಾರೀ ಭದ್ರತೆಯನ್ನು ನಿಯೋಜನೆ ಮಾಡಲಾಗಿತ್ತು. ಪ್ರತಿಪಕ್ಷಗಳು ಪ್ರತಿಭಟನೆ ಮೆರವಣಿಗೆ ಆರಂಭಿಸುತ್ತಿದ್ದಂತೆಯೇ ಪೊಲೀಸರು ನಾಯಕರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಬಸ್ ನಲ್ಲಿ ಕೂರಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ವರದಿಗಳು ತಿಳಿಸಿವೆ.

ಪ್ರತಿಭಟನಾ ಮೆರವಣಿಗೆ ಅನುಮತಿ ಪಡೆಯಲಾಗಿರಲಿಲ್ಲ. ಅಲ್ಲದೆ, ಭೇಟಿಗೆ ರಾಷ್ಟ್ರಪತಿಗಳೂ ಕೂಡ ಸಮಯ ನೀಡಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ನಡುವೆ ಹಲವು ರಾಜ್ಯಗಳಲ್ಲೂ ಕಾಂಗ್ರೆಸ್ ಘಟಗಳು ಏಕಕಾಲದಲ್ಲಿ ಪ್ರತಿಭಟನೆ ನಡೆಸಿವೆ. ಸೂರತ್ ಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ, ಇತರ ಮುಖಂಡರು ಮತ್ತು ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com