ಕೋಲ್ಕತ್ತಾ: ಇಂದು ಸಂಜೆ ಮಮತಾ ಬ್ಯಾನರ್ಜಿ ಭೇಟಿ ಮಾಡಲಿರುವ ಎಚ್.ಡಿ ಕುಮಾರಸ್ವಾಮಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.
Published: 24th March 2023 03:24 PM | Last Updated: 24th March 2023 06:13 PM | A+A A-

ಎಚ್‌ಡಿ ಕುಮಾರಸ್ವಾಮಿ- ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.
ಸಂಜೆ 4 ಗಂಟೆಗೆ ಭಬಾನಿಪುರದಲ್ಲಿರುವ ಬ್ಯಾನರ್ಜಿ ಅವರ ನಿವಾಸದಲ್ಲಿ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೋಲ್ಕತ್ತಾಕ್ಕೆ ಬಂದಿಳಿಯಲಿರುವ ಎಚ್‌ಡಿ ಕುಮಾರಸ್ವಾಮಿ ಅವರು ಬ್ಯಾನರ್ಜಿ ನಿವಾಸಕ್ಕೆ ತೆರಳಲಿದ್ದಾರೆ. ಸಭೆಯ ನಂತರ ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡುವ ಸಾಧ್ಯತೆಯಿದೆ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ಉಭಯ ನಾಯಕರು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು 2024 ರ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಂದಿನ ಮಾರ್ಗಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.
ಕಾಂಗ್ರೆಸ್ಸೇತರ, ಬಿಜೆಪಿಯೇತರ ನಾಯಕರೊಂದಿಗಿನ ಸಭೆಗಳು ಪ್ರಾದೇಶಿಕ ಶಕ್ತಿಗಳ ನಡುವೆ ಒಗ್ಗಟ್ಟು ಮೂಡಿಸುವ ಪಕ್ಷದ ಪ್ರಯತ್ನಗಳ ಭಾಗವಾಗಿದೆ ಎಂದು ಅವರು ಹೇಳಿದರು.
2019ರ ಜನವರಿಯಲ್ಲಿ ಕೋಲ್ಕತ್ತಾದಲ್ಲಿ ಬ್ಯಾನರ್ಜಿ ಕರೆದಿದ್ದ ವಿರೋಧ ಪಕ್ಷಗಳ ಸಭೆಯಲ್ಲಿ ಕುಮಾರಸ್ವಾಮಿ ಭಾಗವಹಿಸಿದ್ದರು.
ಈ ಸಭೆಯು ಒಂದು ವಾರದೊಳಗೆ ಬಿಜೆಪಿಯೇತರ, ಕಾಂಗ್ರೆಸ್ಸೇತರ ನಾಯಕರೊಂದಿಗೆ ಮಮತಾ ಬ್ಯಾನರ್ಜಿಯವರ ಮೂರನೇ ಸಭೆಯಾಗಿದೆ.
ಗುರುವಾರ, ಬ್ಯಾನರ್ಜಿ ಅವರು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭುವನೇಶ್ವರದಲ್ಲಿ ಭೇಟಿಯಾದರು.
ಕಳೆದ ವಾರ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದರು.