ನಾನು ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ: ಲೋಕಸಭಾ ಸದಸ್ಯತ್ವ ಅನರ್ಹತೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ನಾನು ಭಾರತೀಯರ ಧ್ವನಿಗಾಗಿ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ನಾನು ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ 52 ವರ್ಷದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, "ನಾನು ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ" ಎಂದು ತಿಳಿಸಿದ್ದಾರೆ.

ಗುರುವಾರ, ಸೂರತ್‌ನ ನ್ಯಾಯಾಲಯ, ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com