ವಿರೋಧ ಪಕ್ಷಗಳ ಪ್ರಮುಖ ಧ್ವನಿಗಳನ್ನು ಮೌನಗೊಳಿಸಲು ಕಾನೂನನ್ನು ಮಧ್ಯೆ ತರಬಾರದು: ಪಿ ಚಿದಂಬರಂ

ದೃಢವಾದ ರಾಜಕೀಯ ಭಾಷಣವು ಪ್ರಜಾಪ್ರಭುತ್ವದ ಮೂಲತತ್ವವಾಗಿದೆ ಮತ್ತು ಪ್ರತಿಪಕ್ಷಗಳ ಪ್ರಮುಖ ಧ್ವನಿಯನ್ನು ಮೌನಗೊಳಿಸಲು ಕಾನೂನನ್ನು ಮಧ್ಯೆ ತರಬಾರದು ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಶುಕ್ರವಾರ ಹೇಳಿದ್ದಾರೆ. 
ಪಿ ಚಿದಂಬಂರಂ
ಪಿ ಚಿದಂಬಂರಂ

ನವದೆಹಲಿ: ದೃಢವಾದ ರಾಜಕೀಯ ಭಾಷಣವು ಪ್ರಜಾಪ್ರಭುತ್ವದ ಮೂಲತತ್ವವಾಗಿದೆ ಮತ್ತು ಪ್ರತಿಪಕ್ಷಗಳ ಪ್ರಮುಖ ಧ್ವನಿಯನ್ನು ಮೌನಗೊಳಿಸಲು ಕಾನೂನನ್ನು ಮಧ್ಯೆ ತರಬಾರದು ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಶುಕ್ರವಾರ ಹೇಳಿದ್ದಾರೆ. 

'ಮೋದಿ ಉಪನಾಮ'ದ ಕುರಿತಾದ ಟೀಕೆಗಳ ವಿರುದ್ಧ ದಾಖಲಾದ 2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. 

ಸದ್ಯ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದೆ ಮತ್ತು ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲು 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದೆ.

ಯಾರನ್ನೂ ಹೆಸರಿಸದೆ ಟ್ವೀಟ್ ಮಾಡಿರುವ ಚಿದಂಬರಂ, 'ದೃಢವಾದ ರಾಜಕೀಯ ಭಾಷಣವು ಪ್ರಜಾಪ್ರಭುತ್ವದ ಮೂಲತತ್ವವಾಗಿದೆ. ಪ್ರಜಾಸತ್ತಾತ್ಮಕ ವಿರೋಧದ ಪ್ರಮುಖ ಧ್ವನಿಗಳನ್ನು ಮೌನಗೊಳಿಸಲು ಕಾನೂನನ್ನು ಮಧ್ಯೆ ತರಬಾರದು. ಪ್ರಜಾಸತ್ತಾತ್ಮಕ ಧ್ವನಿಗಳ 'ಅವಸ್ಥೆ' ಕುರಿತು ಶಾಂತ ಆತ್ಮಾವಲೋಕನದ ಮೂಲಕ ಕಾನೂನಿನ 'ಪರಾಕ್ರಮ'ದ ಗದ್ದಲವನ್ನು ತಗ್ಗಿಸಬೇಕು' ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ದೋಷಾರೋಪಣೆಯು 'ದೋಷಯುತ ಮತ್ತು ಸಮರ್ಥನೀಯವಲ್ಲ' ಮತ್ತು ಅದನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ತೀರ್ಪಿಗೆ ತಡೆ ಮತ್ತು ರದ್ದುಪಡಿಸುವ ಭರವಸೆಯನ್ನು ವ್ಯಕ್ತಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com