ಜಾರ್ಖಂಡ್‌: ನವಜಾತ ಶಿಶುವನ್ನು 4.5 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ತಾಯಿ, 11 ಮಂದಿಯ ಬಂಧನ

ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಹುಟ್ಟಿದ ಕೂಡಲೇ ಗಂಡು ಮಗುವನ್ನು ತಾಯಿಯೇ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನವಜಾತ ಶಿಶು(ಸಾಂಕೇತಿಕ ಚಿತ್ರ)
ನವಜಾತ ಶಿಶು(ಸಾಂಕೇತಿಕ ಚಿತ್ರ)

ಛತ್ರಾ: ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಹುಟ್ಟಿದ ಕೂಡಲೇ ಗಂಡು ಮಗುವನ್ನು ತಾಯಿಯೇ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಛತ್ರದ ಉಪ ಆಯುಕ್ತ ಅಬು ಇಮ್ರಾನ್ ಘಟನೆಯ ಬಗ್ಗೆ ಮಾಹಿತಿ ಪಡೆದರು.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು ರಕ್ಷಿಸಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಅವಿನಾಶ್ ಕುಮಾರ್ ತಿಳಿಸಿದ್ದಾರೆ.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರ್, ಆಶಾದೇವಿಯಿಂದ 1 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕೆಯ ಬಂಧನದಿಂದ ಡಿಂಪಲ್ ದೇವಿ ಎಂದು ಗುರುತಿಸಲಾದ 'ಸಾಹಿಯಾ ದೀದಿ' ಬಗ್ಗೆ ತಿಳಿಯಿತು. ಡಿಂಪಲ್ ದೇವಿ ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ಬೊಕಾರೊದಿಂದ ಮಗುವನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಜಾರಿಬಾಗ್ ಜಿಲ್ಲೆಯ ಬಡ್ಕಗಾಂವ್ ಗ್ರಾಮದ ದಂಪತಿ 4.5 ಲಕ್ಷ ರೂ.ಗೆ ನವಜಾತ ಶಿಶುವನ್ನು ನೀಡುವುದಾಗಿ ಛತ್ರಾ ಮತ್ತು ಬೊಕಾರೊದ ಇಬ್ಬರು ದಲ್ಲಾಳಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಮಗುವಿನ ತಾಯಿಗೆ 1 ಲಕ್ಷ ರೂಪಾಯಿ ನೀಡಿದರೆ, ಉಳಿದ 3. 5 ಲಕ್ಷ ರೂಪಾಯಿಯನ್ನು ದಲ್ಲಾಳಿಗಳಿಗೆ ಹಂಚಲಾಗಿದೆ ಎಂದು ಅವರು ಹೇಳಿದರು.

ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ವೈದ್ಯ ಮನೀಶ್ ಲಾಲ್ ಹೇಳಿಕೆ ಮೇರೆಗೆ ಛತ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com