ವಿಪಕ್ಷಗಳು, ಪ್ರಜಾಪ್ರಭುತ್ವ ಮುಗಿಸಲು ಬಿಜೆಪಿ ಬಯಸುತ್ತಿದೆ: ಪ್ರಿಯಾಂಕಾ ಗಾಂಧಿ ಕಿಡಿ
ಆರ್ ಜೆಡಿ ನಾಯಕರಾದ ತೇಜಸ್ವಿ ಯಾದವ್ ಮತ್ತು ಮಿಸಾ ಭಾರತಿ ಅವರನ್ನು ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುತ್ತಿರುವ ಬಗ್ಗೆ ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ವಿಪಕ್ಷಗಳು ಮತ್ತು ಪ್ರಜಾಪ್ರಭುತ್ವವನ್ನು ಮುಗಿಸಲು ಆಡಳಿತಾರೂಢ ಪಕ್ಷ ಬಯಸಿದೆ ಎಂದು ಕಿಡಿಕಾರಿದ್ದಾರೆ.
Published: 25th March 2023 11:02 PM | Last Updated: 25th March 2023 11:04 PM | A+A A-

ಪ್ರಿಯಾಂಕಾ ಗಾಂಧಿ ವಾದ್ರಾ
ನವದೆಹಲಿ: ಆರ್ ಜೆಡಿ ನಾಯಕರಾದ ತೇಜಸ್ವಿ ಯಾದವ್ ಮತ್ತು ಮಿಸಾ ಭಾರತಿ ಅವರನ್ನು ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುತ್ತಿರುವ ಬಗ್ಗೆ ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ವಿಪಕ್ಷಗಳು ಮತ್ತು ಪ್ರಜಾಪ್ರಭುತ್ವವನ್ನು ಮುಗಿಸಲು ಆಡಳಿತಾರೂಢ ಪಕ್ಷ ಬಯಸಿದೆ ಎಂದು ಕಿಡಿಕಾರಿದ್ದಾರೆ.
ಭೂಮಿ ಬದಲಿಗೆ ರೈಲ್ವೆಯಲ್ಲಿ-ಉದ್ಯೋಗಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರ್ತಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದೆ. ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡಾ ಸಿಬಿಐ ವಿಚಾರಣೆಗೆ ಹಾಜರಾದರು.
ಬಿಜೆಪಿ ಈ ದೇಶದಿಂದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಬಯಸುತ್ತದೆ. ಅದಕ್ಕಾಗಿಯೇ ಅದು ನಿರಂತರವಾಗಿ ವಿಪಕ್ಷಗಳ ಧ್ವನಿಯ ಮೇಲೆ ದಾಳಿ ಮಾಡುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಯಾದವ್ ಮತ್ತು ಭಾರ್ತಿ ಅವರಿಗೆ ಏಜೆನ್ಸಿಗಳು ಕಿರುಕುಳ ನೀಡುತ್ತಿವೆ. ನಾವೆಲ್ಲರೂ ಪ್ರಜಾಪ್ರಭುತ್ವದ ಮೇಲಿನ ದಾಳಿ ವಿರುದ್ಧ ಒಗಟ್ಟಾಗಿ ಹೋರಾಡಬೇಕಿದೆ ಎಂದಿದ್ದಾರೆ.
भाजपा इस देश से विपक्ष और लोकतंत्र खत्म करना चाहती है। इसलिए लगातार विपक्ष के लोगों की आवाज पर हमला कर रही है।
— Priyanka Gandhi Vadra (@priyankagandhi) March 25, 2023
बिहार के उप मुख्यमंत्री श्री @yadavtejashwi जी और मीसा भारती जी को एजेंसियों द्वारा प्रताड़ित किया जा रहा है।
लोकतंत्र पर हो रहे हमले के खिलाफ हम सब एकजुट हैं।