ಅಬ್ದುಲ್ಲಾ ಚೀತಾ ಸಾವು
ದೇಶ
ಸೌದಿ ದೊರೆ ಭಾರತಕ್ಕೆ ಉಡುಗೊರೆಯಾಗಿ ನೀಡಿದ್ದ 'ಅಬ್ದುಲ್ಲಾ' ಚೀತಾ ಸಾವು
ಸೌದಿ ಅರೇಬಿಯಾದ ದೊರೆ ಹೈದರಾಬಾದ್‌ನ ಜವಾಹರಲಾಲ್ ನೆಹರು ಮೃಗಾಲಯಕ್ಕೆ ನೀಡಿದ್ದ ‘ಅಬ್ದುಲ್ಲಾ’ ಎಂಬ ಗಂಡು ಚಿತಾ ಹೃದಯಾಘಾತದಿಂದ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಹೈದರಾಬಾದ್: ಸೌದಿ ಅರೇಬಿಯಾದ ದೊರೆ ಹೈದರಾಬಾದ್‌ನ ಜವಾಹರಲಾಲ್ ನೆಹರು ಮೃಗಾಲಯಕ್ಕೆ ನೀಡಿದ್ದ ‘ಅಬ್ದುಲ್ಲಾ’ ಎಂಬ ಗಂಡು ಚೀತಾ ಹೃದಯಾಘಾತದಿಂದ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
15 ವರ್ಷದ ಈ ಚೀತಾ ಕೆಲ ದಿನಗಳಿಂದ ಕಾಯಿಲೆಯಿಂದ ಬಳಲುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಹೃದಯಾಘಾತವಾಗಿ ಮೃತಪಟ್ಟಿದೆ ಎನ್ನಲಾಗಿದೆ. 2013 ರಲ್ಲಿ ಸೌದಿ ದೊರೆ ಮೊಹಮ್ಮದ್ ಅಲ್ ಸೌದ್ ಅವರು ಭಾರತ ಭೇಟಿ ವೇಳೆ ಹಿಬಾ ಎಂಬ ಒಂದು ಹೆಣ್ಣು ಚೀತಾ ಹಾಗೂ ಅಬ್ದುಲ್ಲಾ ಎಂಬ ಒಂದು ಗಂಡು ಚೀತಾವನ್ನು ಸ್ನೇಹಾರ್ಥವಾಗಿ ಜವಾಹರಲಾಲ್ ನೆಹರು ಮೃಗಾಲಯಕ್ಕೆ ನೀಡಿದ್ದರು.
2020 ರಲ್ಲಿ ಇದೇ ಮೃಗಾಲಯದಲ್ಲಿ ಹಿಬಾ ಚೀತಾ ಮೃತಪಟ್ಟಿತ್ತು. ಕಳೆದ ವರ್ಷ ನಮಿಬಿಯಾದಿಂದ 8 ಚೀತಾಗಳನ್ನು ತಂದು ಭಾರತದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ