ರಾಹುಲ್ ಗಾಂಧಿ ಅನರ್ಹ ವಿಚಾರ: 'ವಿನಾಶ ಕಾಲೇ ವಿಪರೀತ ಬುದ್ಧಿ' ಎಂದು ಮೋದಿ ವಿರುದ್ಧ ಶತೃಘ್ನ ಸಿನ್ಹಾ ಆಕ್ರೋಶ

ರಾಹುಲ್ ಗಾಂಧಿ ಅನರ್ಹ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಟಿಎಂಸಿ ಸಂಸದ ಶತೃಘ್ನ ಸಿನ್ಹಾ 'ವಿನಾಶ ಕಾಲೇ ವಿಪರೀತ ಬುದ್ಧಿ' ಎಂದು ಟೀಕಿಸಿದ್ದಾರೆ.
ಶತೃಘ್ನ ಸಿನ್ಹಾ
ಶತೃಘ್ನ ಸಿನ್ಹಾ

ನವದೆಹಲಿ: ರಾಹುಲ್ ಗಾಂಧಿ ಅನರ್ಹ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಟಿಎಂಸಿ ಸಂಸದ ಶತೃಘ್ನ ಸಿನ್ಹಾ 'ವಿನಾಶ ಕಾಲೇ ವಿಪರೀತ ಬುದ್ಧಿ' ಎಂದು ಟೀಕಿಸಿದ್ದಾರೆ.

ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಶತೃಘ್ನ ಸಿನ್ಹಾ, ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತನ್ನ ಪತನದ ಆರಂಭಿಸಿದ್ದಾರೆ. ಇದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. 'ವಿನಾಶ ಕಾಲೇ ವಿಪರೀತ ಬುದ್ಧಿ'ಗೆ ಇದು ಉತ್ತಮ ಉದಾಹರಣೆಯಾಗಿದೆ. ಮೋದಿ ಸರ್ಕಾರದ ಈ ಕಾರ್ಯ ಪ್ರಜಾಪ್ರಭುತ್ವವನ್ನು ರಕ್ಷಿಸುವುದಲ್ಲದೆ ರಾಹುಲ್ ಗಾಂಧಿ ಮತ್ತು ಪ್ರತಿಪಕ್ಷಗಳಿಗೆ 100ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಪ್ರಮುಖ ವಿರೋಧ ಪಕ್ಷದ ನಾಯಕನಿಗೆ ಸಂಸತ್ತಿನಲ್ಲಿ ಧ್ವನಿ ಎತ್ತಲು ಅವಕಾಶ ನೀಡದಿರುವುದು ಈ ದೇಶದ ಪ್ರಜಾಪ್ರಭುತ್ವಕ್ಕೆ ಒಳ್ಳೆಯದೇ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷಗಳಿಗೂ ಧನ್ಯವಾದ ಎಂದ ಖರ್ಗೆ
ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ರಾಹುಲ್‌ ಗಾಂಧಿಯವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷವು ರಾಜ್‌ಘಾಟ್‌ನಲ್ಲಿ 'ಸಂಕಲ್ಪ ಸತ್ಯಾಗ್ರಹ' ನಡೆಸುತ್ತಿದೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಪ್ರಜಾಪ್ರಭುತ್ವದ ಉಳಿವಿಗಾಗಿ ರಾಹುಲ್‌ ಗಾಂಧಿ ಬೆನ್ನಿಗೆ ನಿಂತ ಎಲ್ಲ ವಿರೋಧ ಪಕ್ಷಗಳಿಗೂ ಧನ್ಯವಾದ ಎಂದಿದ್ದಾರೆ.

'ಇದು ಕೇವಲ ಒಂದು ಸತ್ಯಾಗ್ರಹವಷ್ಟೇ. ಇಂತಹ ಸಾಕಷ್ಟು ಸತ್ಯಾಗ್ರಹಗಳು ದೇಶದುದ್ದಕ್ಕೂ ನಡೆಯಲಿವೆ. ನಾವು ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ವಾಕ್‌ ಸ್ವಾತಂತ್ರ್ಯದ ರಕ್ಷಣೆಗಾಗಿ ಯಾವ ತ್ಯಾಗಕ್ಕೂ ಸಿದ್ಧರಿದ್ದೇವೆ' ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com