ಲೋಕಸಭಾ ಸ್ಪೀಕರ್ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ತಯಾರಿ

ಪಕ್ಷಪಾತ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ  ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಇತರ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ನವದೆಹಲಿ: ಪಕ್ಷಪಾತ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಇತರ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಇಂದು ಬೆಳಗ್ಗೆ ನಡೆದ ಪಕ್ಷದ ಸಂಸದರ ಸಭೆಯಲ್ಲಿ ಈ ಕುರಿತು ಪ್ರಸ್ತಾವನೆಯನ್ನು ಮಂಡಿಸಲಾಗಿದ್ದು, ಕಾಂಗ್ರೆಸ್ ನಾಯಕರು ಈ ಕುರಿತು ಇತರ ಪಕ್ಷದ ನಾಯಕರೊಂದಿಗೆ ಮಾತನಾಡುತ್ತಿದ್ದಾರೆ ಎನ್ನಲಾಗಿದೆ. 

ಲೋಕಸಭೆಯಲ್ಲಿ ಸೋಮವಾರ ಈ ಪ್ರಸ್ತಾಪವನ್ನು ಮಂಡಿಸುವ ಸಾಧ್ಯತೆಯಿದೆ. ಆದರೆ ಈ ಕ್ರಮ ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಧಕ್ಕೆ ತರಬಹುದು ಎಂಬ ಕಾರಣಕ್ಕೆ ಕೆಲವು ಪಕ್ಷಗಳು ವಿರೋಧಿಸುತ್ತಿವೆ ಎಂದು ಮೂಲಗಳು ಹೇಳಿವೆ. 

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಕೆಲವೇ ಗಂಟೆಗಳಲ್ಲಿ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿದ ಕಾರಣಕ್ಕಾಗಿ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದೆ.  ಸದನ ಸುಸೂತ್ರವಾಗಿದ್ದಾಗ ಮಾತ್ರ ಅವಿಶ್ವಾಸ ಗೊತ್ತುವಳಿ ಮಂಡಿಸಲು ಸಾಧ್ಯ ಎಂದು ತಿಳಿದುಬಂದಿದೆ.

ಅಂತಹ ನಿರ್ಣಯಕ್ಕೆ 50 ಸಂಸದರ ಸಹಿ ಮತ್ತು ಬೆಂಬಲದ ಅಗತ್ಯವಿದೆ. ಆದರೆ ಸದನ ಸರಿಯಾಗಿ ನಡೆಯುತ್ತಿಲ್ಲ  ಎಂಬ ಕಾರಣಕ್ಕಾಗಿ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ನೀಡಲು ಅವಕಾಶ ನೀಡದೆ ಇರಬಹುದು ಎಂದು ವಿಪಕ್ಷಗಳ ಮೂಲಗಳು ಆತಂಕ ವ್ಯಕ್ತಪಡಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com