ರಾಹುಲ್ ಗಾಂಧಿ ಅನರ್ಹತೆ: ಕೆಂಪು ಕೋಟೆಯಿಂದ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮಂಗಳವಾರ ಹಳೆ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಕೆಂಪು ಕೋಟೆಯಿಂದ ಟೌನ್ ಹಾಲ್‌ ವರೆಗೆ ಪಂಜಿನ...
ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಮುಖವಾಡ ಧರಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು
ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಮುಖವಾಡ ಧರಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮಂಗಳವಾರ ಹಳೆ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಕೆಂಪು ಕೋಟೆಯಿಂದ ಟೌನ್ ಹಾಲ್‌ ವರೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ಇಂದು ಸಂಜೆ 7 ಗಂಟೆಗೆ ಕೆಂಪುಕೋಟೆಯಿಂದ ಆರಂಭವಾಗುವ ಲೋಕತಂತ್ರ ಬಚಾವೋ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಸಂಸದರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೆರವಣಿಗೆಯಲ್ಲಿ ಪಕ್ಷದ ಸಂಸದರು ಕೈಯಲ್ಲಿ ಉರಿಯುವ ಪಂಜು ಹಿಡಿದು ಸಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಬೀದಿಗಿಳಿಯುವುದಾಗಿ ಮತ್ತು ಈ ವಿಷಯದ ಬಗ್ಗೆ ಜನರ ಬಳಿ ಹೋಗುವುದಾಗಿ ಕಾಂಗ್ರೆಸ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com