ಚುನಾವಣೆ ಎದುರಿಸಲು ಬಿಜೆಪಿ ಸದಾ ಸಿದ್ಧ: ಸಿಎಂ ಬೊಮ್ಮಾಯಿ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿ ಚುನಾವಣೆಗೆ ಎದುರಿಸಲು "ಸದಾ ಸಿದ್ಧವಾಗಿದೆ"...
Published: 29th March 2023 05:12 PM | Last Updated: 04th April 2023 10:45 AM | A+A A-

ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿ ಚುನಾವಣೆಗೆ ಎದುರಿಸಲು "ಸದಾ ಸಿದ್ಧವಾಗಿದೆ" ಎಂದು ಬುಧವಾರ ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಇಂದು ಪ್ರಕಟವಾಗಿದ್ದು, ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಮತ್ತು ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.
ಇದನ್ನು ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ: ಒಂದೇ ಹಂತದಲ್ಲಿ ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ
ಬಿಜೆಪಿ ಪ್ರಬಲ ಸಂಘಟನೆಯೊಂದಿಗೆ ಚುನಾವಣೆಗೆ ಸದಾ ಸಿದ್ಧವಾಗಿರುವ ಪಕ್ಷವಾಗಿದೆ ಮತ್ತು ನಾವು ಚುನಾವಣೆಗೆ ಸನ್ನದ್ಧರಾಗಿದ್ದೇವೆ. ನಾವು ಸಾಕಷ್ಟು ಪ್ರಚಾರ ಮಾಡಿದ್ದೇವೆ. ಜನರ ಪ್ರತಿಕ್ರಿಯೆ ಅದ್ಭುತವಾಗಿದೆ. ಡಬಲ್ ಇಂಜಿನ್ ಸರ್ಕಾರ ಮೂಲಸೌಕರ್ಯ ಮತ್ತು ಇತರ ವಿಷಯಗಳಲ್ಲಿ ಉತ್ತಮ ಕೆಲಸ ಮಾಡಿದೆ. ಮೇ 13 ರಂದು ಬಿಜೆಪಿ ಸಂಪೂರ್ಣ ಬಹುಮತ ಪಡೆಯುವುದು ಖಚಿತ ಎಂದು ಸಿಎಂ ಹೇಳಿದರು.
ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ, ಒಳಮೀಸಲಾತಿ, ನೆನೆಗುದಿಗೆ ಬಿದ್ದ ಸಮಸ್ಯೆಗಳಿಗೆ ಪರಿಹಾರ, ಒಬಿಸಿ ಯಲ್ಲಿ ಬದಲಾವಣೆ ಜನಮಾನಸದಲ್ಲಿ ಪಕ್ಷ ಹಾಗೂ ಸರ್ಕಾರದ ಪರವಾಗಿ ಜನತಾ ಜನಾರ್ದನ ಇದೆ. ಈ ಬಾರಿ ನಮ್ಮ ಕೆಲಸಗಳ ಆಧಾರದ ಮೇಲೆ ಸಕಾರಾತ್ಮಕ ತೀರ್ಪನ್ನು ಕೇಳುತ್ತಿದ್ದೇವೆ. ಜನರ ಆಶೀರ್ವಾದ ನಮ್ಮ ಪರವಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.