ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವ ಕುರಿತು ಪರಿಶೀಲನೆ: ಚುನಾವಣಾ ಆಯೋಗ

ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವ ಕುರಿತು ಪರಿಶೀಲನೆ ನಡೆಸುತ್ತಿರುವುದಾಗಿ ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ.
ರಾಜೀವ್ ಕುಮಾರ್
ರಾಜೀವ್ ಕುಮಾರ್

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವ ಕುರಿತು ಪರಿಶೀಲನೆ ನಡೆಸುತ್ತಿರುವುದಾಗಿ ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಎಎಪಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವ ಕುರಿತು ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, "ಇದು ಪರಿಶೀಲನೆಯಲ್ಲಿದೆ... ನಾವು ಶೀಘ್ರದಲ್ಲೇ ನಿಮಗೆ ಮಾಹಿತಿ ನೀಡುತ್ತೇವೆ" ಎಂದು ಹೇಳಿದರು.

ಕಳೆದ ವರ್ಷ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಚುನಾವಣಾ ಸಾಧನೆಗಳು ಚುನಾವಣಾ ಆಯೋಗ ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ದಾರಿ ಮಾಡಿಕೊಟ್ಟಿದೆ.

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠಿ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಲ್ಪಡಬೇಕು ಮತ್ತು ಆಯಾ ಶಾಸಕಾಂಗ ಸಭೆಗಳಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನು ಹೊಂದಿರಬೇಕು.

ಎಎಪಿ ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್ ನಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಲ್ಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com