ಮಧ್ಯಪ್ರದೇಶ: ಇಂದೋರ್ ನಲ್ಲಿ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 14 ಮಂದಿ ಸಾವು!

ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು, ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ. 
ಮಧ್ಯಪ್ರದೇಶದಲ್ಲಿ ಬಾವಿ ಕುಸಿತದ ಘಟನೆ ನಡೆದ ಸ್ಥಳ
ಮಧ್ಯಪ್ರದೇಶದಲ್ಲಿ ಬಾವಿ ಕುಸಿತದ ಘಟನೆ ನಡೆದ ಸ್ಥಳ
Updated on

ಮಧ್ಯಪ್ರದೇಶ: ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು, ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದಾರೆ. 

ರಾಮನವಮಿ ಅಂಗವಾಗಿ ಹೆಚ್ಚಿನ ಜನ ಸೇರಿದ್ದ್ ಅಹಿನ್ನೆಲೆಯಲ್ಲಿ ಬಾವಿಯ ಮೇಲ್ಭಾಗ ಕುಸಿದಿದೆ. ಈ ಭಾಗದಲ್ಲಿ ದೇವಾಲಯವಿತ್ತು. 

ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿವೆ.

40 ಅಡಿ ಆಳದ ಬಾವಿ ಇದಾಗಿದ್ದು, ಈ ವರೆಗಿನ ಮಾಹಿತಿಯ ಪ್ರಕಾರ, 18 ಮಂದಿ ಭಕ್ತಾದಿಗಳು ಬಾವಿಯ ಒಳಗೆ ಸಿಲುಕಿಕೊಂಡಿರುವ ಸಾಧ್ಯತೆಗಳಿವೆ.

"ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜನರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com