ರಾಹುಲ್ ಅನರ್ಹತೆ: ಜರ್ಮನಿಗೆ ಧನ್ಯವಾದ ತಿಳಿಸಿದ ದಿಗ್ವಿಜಯ್ ಸಿಂಗ್; ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್ ಪಕ್ಷ
ರಾಹುಲ್ ಗಾಂಧಿ ಅನರ್ಹತೆ ವಿಚಾರವನ್ನು ಜರ್ಮನಿ ಗಮನಿಸಿದೆ ಎಂಬ ದಿಗ್ವಿಜಯ್ ಸಿಂಗ್ ಹೇಳಿಕೆ, ಟ್ವೀಟ್ ನಿಂದ ಕಾಂಗ್ರೆಸ್ ಪಕ್ಷ ಅಂತರ ಕಾಯ್ದುಕೊಂಡಿದೆ.
Published: 30th March 2023 08:55 PM | Last Updated: 31st March 2023 02:04 PM | A+A A-

ದಿಗ್ವಿಜಯ್ ಸಿಂಗ್
ನವದೆಹಲಿ: ರಾಹುಲ್ ಗಾಂಧಿ ಅನರ್ಹತೆ ವಿಚಾರವನ್ನು ಜರ್ಮನಿ ಗಮನಿಸಿದೆ ಎಂಬ ದಿಗ್ವಿಜಯ್ ಸಿಂಗ್ ಹೇಳಿಕೆ, ಟ್ವೀಟ್ ನಿಂದ ಕಾಂಗ್ರೆಸ್ ಪಕ್ಷ ಅಂತರ ಕಾಯ್ದುಕೊಂಡಿದೆ.
ಭಾರತದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಅದರೆಡೆಗೆ ಒಡ್ಡಿದ ಬೆದರಿಕೆ, ಅಪಾಯಗಳನ್ನು ಸ್ವತಃ ಎದುರಿಸಬೇಕಾಗುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ದಿಗ್ವಿಜಯ್ ಸಿಂಗ್ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ.
ರಾಹುಲ್ ಗಾಂಧಿಗೆ ಕಿರುಕುಳ ನೀಡುವ ಮೂಲಕ ಭಾರತದಲ್ಲಿ ಪ್ರಜಾಪ್ರಭುತ್ವದ ವಿಷಯದಲ್ಲಿ ಹೇಗೆ ರಾಜಿಮಾಡಿಕೊಳ್ಳಲಾಗುತ್ತಿದೆ ಎಂಬುದನ್ನು ಗಮನಿಸಿದ ಜರ್ಮನಿಯ ವಿದೇಶಾಂಗ ಸಚಿವಾಲಯ ಹಾಗೂ ಡಾಯ್ಚ ವೆಲ್ಲೆಯ ಮುಖ್ಯ ಅಂತಾರಾಷ್ಟ್ರೀಯ ಸಂಪಾದಕ ರಿಚರ್ಡ್ ವಾಕರ್ ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದರು.
ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆಯ ವಿಷಯ ಗಮನಿಸಿದ ಜರ್ಮನಿ: ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರ
ಬಿಜೆಪಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಭಾರತದ ಆಂತರಿಕ ವಿಷಯಗಳಿಗೆ ಪ್ರವೇಶಿಸುವುದಕ್ಕೆ ಕಾಂಗ್ರೆಸ್ ವಿದೇಶದ ಶಕ್ತಿಗಳಿಗೆ ಆಹ್ವಾನ ನೀಡುತ್ತಿದೆ ಎಂಬ ಗಂಭೀರ ಆರೋಪ ಮಾಡಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ.