ಜಮ್ಮು-ಕಾಶ್ಮೀರ: ಕಥುವಾದಲ್ಲಿ ಪ್ರಬಲ ಸ್ಫೋಟ, ಸ್ಥಳದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಹೀರಾನಗರದಲ್ಲಿ ಬುಧವಾರ ರಾತ್ರಿ ಪ್ರಬಲ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳೀಯ ಜನತೆ ಬೆಚ್ಚಿ ಬಿದ್ದಿದೆ.
ಸ್ಫೋಟ ಸಂಭವಿಸಿದ ಸ್ಥಳದಲ್ಲಿರುವ ಅಧಿಕಾರಿಗಳು.
ಸ್ಫೋಟ ಸಂಭವಿಸಿದ ಸ್ಥಳದಲ್ಲಿರುವ ಅಧಿಕಾರಿಗಳು.

ಕಥುವಾ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಹೀರಾನಗರದಲ್ಲಿ ಬುಧವಾರ ರಾತ್ರಿ ಪ್ರಬಲ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳೀಯ ಜನತೆ ಬೆಚ್ಚಿ ಬಿದ್ದಿದೆ.

ಜಮ್ಮು ಮತ್ತು ಕಾಶ್ಮೀರದ ಹಿರಾನಗರದ (ಕತುವಾ) ಸನ್ಯಾಲ್‌ನಲ್ಲಿರುವ ಭಾರತ-ಪಾಕ್ ಗಡಿಗಿಂತ ನಾಲ್ಕು ಕಿಲೋಮೀಟರ್ ಮೊದಲು ಗಡಿ ಪೊಲೀಸ್ ಪೋಸ್ಟ್ ಬಳಿಯ ಅರಣ್ಯ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಫೋಟ ಹಿನ್ನೆಲೆಯಲ್ಲಿ ಎಸ್‌ಎಸ್‌ಪಿ ಶಿವದೀಪ್ ಸಿಂಗ್ ಜಮ್ವಾಲ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತಪಾಸಣೆ ನಡೆಸುತ್ತಿದ್ದಾರೆ. ಸ್ಫೋಟ ಯಾವ ರೀತಿ ಸಂಭವಿಸಿದೆ ಎಂಬುದಕ್ಕೆ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. ಈ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಸ್ಫೋಟ ಸಂಭವಿಸಿದ ಸ್ಥಳದಲ್ಲಿ ದೊಡ್ಡ ಕುಳಿ ನಿರ್ಮಾಣವಾಗಿದೆ. ಸಮೀಪದಲ್ಲೇ ಸೇತುವೆಯೂ ಇದ್ದು, ಸುತ್ತಮುತ್ತಲಿನ ಹೊಲಗಳಲ್ಲಿ ಬೆಳೆ ಬೆಳೆಯಲಾಗಿದೆ. ಮೂಲಗಳ ಪ್ರಕಾರ, ಇದು ಐಇಡಿಯಂತೆ ಸ್ಫೋಟವೆಂದು ಹೇಳಲಾಗುತ್ತಿದ್ದು, ಈ ಮಾಹಿತಿಗಳ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿಲ್ಲ.

ಈ ನಡುವೆ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭಾರತೀಯ ಸೇನಾಪಡೆ ಭೇಟಿ ನೀಡಿದ್ದು, ಕಾರ್ಯಾಚರಣೆ ವೇಳೆ ಲೈವ್ ಗ್ರೆನೇಡ್ ವೊಂದನ್ನು ವಶಪಡಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com