ದೇಗುಲದ ಬಾವಿಯ ಛಾವಣಿ ಕುಸಿತ ಪ್ರಕರಣ: ಮೃತರ ಸಂಖ್ಯೆ 36ಕ್ಕೆ ಏರಿಕೆ, ಸ್ಥಳಕ್ಕೆ ಸಿಎಂ ಚೌಹಾಣ್ ಭೇಟಿ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಭರವಸೆ!
ಇಂದೋರ್'ನ ದೇವಸ್ಥಾನವೊಂದರ ಮೆಟ್ಟಿಲು ಬಾವಿ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದು, ಘಟನಾ ಸ್ಥಳಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭೇಟಿ ನೀಡಿ, ಶುಕ್ರವಾರ ಪರಿಶೀಲನೆ ನಡಸಿದ್ದಾರೆ.
Published: 31st March 2023 12:45 PM | Last Updated: 31st March 2023 02:43 PM | A+A A-

ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿರುವ ಸಿಎಂ ಶಿವರಾಜ್ ಸಿಂಗ್ ಚೌಹಾಣ್.
ಇಂದೋರ್: ಇಂದೋರ್'ನ ದೇವಸ್ಥಾನವೊಂದರ ಮೆಟ್ಟಿಲು ಬಾವಿ ಕುಸಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದು, ಘಟನಾ ಸ್ಥಳಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭೇಟಿ ನೀಡಿ, ಶುಕ್ರವಾರ ಪರಿಶೀಲನೆ ನಡಸಿದ್ದಾರೆ.
ಸ್ಥಳಕ್ಕೆ ತೆರಳಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ರಕ್ಷಣಾ ಕಾರ್ಯಾಚರಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದರು.
ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಮ್ಯಾಜಿಸ್ಟ್ರೇಟ್ ತನಿಖೆಗೂ ಆದೇಶಿಸಲಾಗಿದೆ. ದುರ್ಘಟನೆಗೆ ಕಾರಣರಾದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
#WATCH | Madhya Pradesh CM Shivraj Singh Chouhan along with his cabinet ministers inspects rescue efforts at the site of the stepwell collapse in Indore.
— ANI MP/CG/Rajasthan (@ANI_MP_CG_RJ) March 31, 2023
The incident has claimed 35 lives till now. pic.twitter.com/qx8APzgpyh
ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಧಾನಮಂತ್ರಿಗಳು ಕೂಡ ಈಗಾಗಲೇ ಪರಿಹಾರಗಳನ್ನು ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ ಇಂತಹ ಸ್ಟೆಪ್‌ವೆಲ್‌ಗಳು ಮತ್ತು ಬೋರ್‌ವೆಲ್‌ಗಳ ಪರಿಶೀಲನೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಇಂದೋರ್: ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ ಪ್ರಕರಣ; ಮೃತರ ಸಂಖ್ಯೆ 35ಕ್ಕೆ ಏರಿಕೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ರಾಮನವಮಿ ನಿಮಿತ್ತ ಇಂದೋರ್'ನ ಬೇಲೇಶ್ವರ ದೇವಸ್ಥಾನದಲ್ಲಿ ಹೋಮ ಹವನ ಏರ್ಪಡಿಸಲಾಗಿತ್ತು. ಇದರಲ್ಲಿ ಪಾಲ್ಗೊಳ್ಳಲು ಭಾರೀ ಸಂಖ್ಯೆಯಲ್ಲಿ ಜನ ಬಂದು ನೂಕು ನುಗ್ಗಲು ಏರ್ಪಟ್ಟಿತ್ತು. ಈ ವೇಳೆ ದೇಗುಲದ ಬಾವಿ ಬಳಿಯ ಭೂಮಿ ಕುಸಿದಿದ್ದು, ಇದರ ಪರಿಣಾಮ ಅಲ್ಲೇ ಇದ್ದ ಬಾವಿಯ ಕಬ್ಬಿಣದ ಸರಳಿನ ಮೇಲ್ಛಾವಣಿಯೂ ಕುಸಿದು ಬಿದ್ದಿತ್ತು. ಈ ವೇಳೆ ಸ್ಥಳದಲ್ಲಿದ್ದ ಹಲವು ಮಂದಿ ಭಕ್ತರು ಬಾವಿಗೆ ಬಿದ್ದಿದ್ದರು. ದುರ್ಘಟನೆಯಲ್ಲಿ ಈ ವರೆಗೂ 35 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.