ಕೋವಿಡ್ ಪ್ರಕರಣಗಳ ಇಳಿಕೆ; ದೇಶದಲ್ಲಿಂದು 4,282 ಹೊಸ ಪ್ರಕರಣ ಪತ್ತೆ, 14 ಮಂದಿ ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,282 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 47,246ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
Published: 01st May 2023 10:58 AM | Last Updated: 01st May 2023 10:58 AM | A+A A-

ಪ್ರಾತಿನಿಧಿಕ ಚಿತ್ರ
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,282 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 6,037 ಮಂದಿ ಸೋಂಕಿನಿಂತ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 47,246ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ ಆರು ಮಂದಿ ಸೇರಿದಂತೆ ಇಂದು 14 ಮಂದಿ ಮೃತಪಟ್ಟಿದ್ದು, ಈವರೆಗೆ ಒಟ್ಟು 5,31,547 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.
#COVID19 | India reports 4,282 new cases and 6,037 recoveries in the last 24 hours; the active caseload stands at 47,246.
(Representative image) pic.twitter.com/XO9gWG7Uh0— ANI (@ANI) May 1, 2023
ದೈನಂದಿನ ಪಾಸಿಟಿವಿಟಿ ದರ ಶೇ 4.92ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 4.00ರಷ್ಟಿದೆ. ದೇಶದಲ್ಲಿ ಈವರೆಗೆ 4,49,49,671 ಮಂದಿ ಸೋಂಕಿತರಾಗಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ. ಇದೇ ವೇಳೆ ದೇಶದಾದ್ಯಂತ ಈವರೆಗೆ 4,43,70,878 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ. ಎಂದು ಸಚಿವಾಲಯ ತಿಳಿಸಿದೆ.
ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಲಾಗಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 220.66 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.