ಕೋವಿಡ್-19: ದೇಶದಲ್ಲಿಂದು 3,325 ಹೊಸ ಪ್ರಕರಣ ಪತ್ತೆ, ಕೇರಳದಲ್ಲಿ 7 ಸೇರಿದಂತೆ 17 ಮಂದಿ ಸಾವು
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
Published: 02nd May 2023 11:04 AM | Last Updated: 02nd May 2023 02:46 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳಲ್ಲಿ 7 ಮಂದಿ ಸೇರಿದಂತೆ ದೇಶದಾದ್ಯಂತ 17 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಈವರೆಗೆ 5,31,564 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.
ಇದೇ ವೇಳೆ ದೇಶದಲ್ಲಿ ಸೋಂಕಿತರ ಸಂಖ್ಯೆ 4,49,52,996 ಕ್ಕೆ ಏರಿಕೆಯಾಗಿದೆ. ಈ ಪೈಕಿ ಸಕ್ರಿಯ ಪ್ರಕರಣಗಳ ಸಂಖ್ಯೆ 0.11 ಕ್ಕೆ ಇಳಿಕೆಯಾಗಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71 ರಷ್ಟಿದೆ. ಸದ್ಯ ಈವರೆಗೆ 4,43,77,257 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
#COVID19 | India reports 3,325 new cases and 6,379 recoveries in the last 24 hours; the active caseload stands at 44,175.
— ANI (@ANI) May 2, 2023
(Representative image) pic.twitter.com/gxC6P9rtuH
ದೈನಂದಿನ ಮರಣ ಪ್ರಮಾಣ ಶೇ 1.18 ರಷ್ಟಿದೆ. ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಲಾಗಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.