ಸಲಿಂಗ ವಿವಾಹ: ಸಮಸ್ಯೆ ಪರಿಹರಿಸಲು ಸಮಿತಿ ರಚನೆ; ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ
ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಇರುವ ಸಮಸ್ಯೆಗಳ ಪರಿಹರಿಸಲು ಸಮಿತಿಯನ್ನು ರಚಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ ತಿಳಿಸಿದೆ.
Published: 03rd May 2023 01:52 PM | Last Updated: 03rd May 2023 02:56 PM | A+A A-

ಸಂಗ್ರಹ ಚಿತ್ರ
ನವದೆಹಲಿ: ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಇರುವ ಸಮಸ್ಯೆಗಳ ಪರಿಹರಿಸಲು ಸಮಿತಿಯನ್ನು ರಚಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ ತಿಳಿಸಿದೆ.
ಸಲಿಂಗ ವಿವಾಹವನ್ನು ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸಂಪುಟ ಕಾರ್ಯದರ್ಶಿ ನೇತೃತ್ವದ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ
ಇದನ್ನೂ ಓದಿ: ಸಲಿಂಗ ಸಂಬಂಧವನ್ನು ಕೇವಲ ದೈಹಿಕ ಸಂಬಂಧವಾಗಿ ನೋಡಬಾರದು: ಸಿಜೆಐ ಡಿವೈ ಚಂದ್ರಚೂಡ್
ಈ ವೇಳೆ ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್, ಎಸ್ ಆರ್ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠಕ್ಕೆ ಅವರು, ಇದಕ್ಕೆ ಒಂದಕ್ಕಿಂತ ಹೆಚ್ಚು ಸಚಿವಾಲಯಗಳ ನಡುವೆ ಸಮನ್ವಯತೆಯ ಅಗತ್ಯವಿದೆ ಎಂದು ಹೇಳಿದೆ.
ಈ ನಿಟ್ಟಿನಲ್ಲಿ ಯಾವ ಆಡಳಿತಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಹುದೆಂಬುದನ್ನು ಅನ್ವೇಷಿಸಲು ಅರ್ಜಿದಾರರು ತಮ್ಮ ಸಲಹೆಗಳನ್ನು ನೀಡಬಹುದು ಎಂದು ನ್ಯಾಯಮೂರ್ತಿ ಮೆಹ್ತಾ ಅವರು ಹೇಳಿದ್ದಾರೆ.