ಕುಪ್ವಾರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಕುಪ್ವಾರ ಜಿಲ್ಲೆಯ ಪಿಚ್ನಾಡ್ ಮಚಿಲ್ ಪ್ರದೇಶದ ಬಳಿ ಭದ್ರತಾ ಪಡೆಗಳು ಎನ್ಕೌಂಡರ್ ನಡೆಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ಇನ್ನೂ ಹಲವು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳವನ್ನು ಸುತ್ತುವರೆದಿರುವ ಭದ್ರತಾಪಡೆಗಳು ಹಾಗೂ ಜಮ್ಮು-ಕಾಶ್ಮೀರದ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com