ಕರ್ನಾಟಕ ಚುನಾವಣೆ: ಹೈದರಾಬಾದ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ವಿರೋಧಿಸಿ ಬಜರಂಗದಳ ಪ್ರತಿಭಟನೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರೋಧಿಸಿ ಬಜರಂಗದಳ ಕಾರ್ಯಕರ್ತರು ಬುಧವಾರ ಗಾಂಧಿ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
Published: 04th May 2023 08:54 AM | Last Updated: 04th May 2023 08:54 AM | A+A A-

ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ
ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರೋಧಿಸಿ ಬಜರಂಗದಳ ಕಾರ್ಯಕರ್ತರು ಬುಧವಾರ ಗಾಂಧಿ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ತೆಲಂಗಾಣದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್‌ನ ಪ್ರತಿಕೃತಿ ದಹಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಿಎಫ್‌ಐ ಮತ್ತು ಬಜರಂಗದಳವನ್ನು ನಿಷೇಧಿಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಇದು ಹಿಂದುಪರ ಸಂಘಟನೆ ಬಜರಂಗದಳದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನು ಓದಿ: ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ- ವೀರಪ್ಪ ಮೊಯ್ಲಿ
ಭಾರೀ ಪೊಲೀಸ್ ಬಂದೋಬಸ್ತ್ ನಡುವೆಯೂ ಮಂಗಳವಾರ ಬೆಳಗ್ಗೆ 10.30ರ ಸುಮಾರಿಗೆ ಸುಮಾರು 300 ಬಜರಂಗದಳ ಕಾರ್ಯಕರ್ತರು ನಾಲ್ಕು ಹಂತಗಳಲ್ಲಿ ಗಾಂಧಿ ಭವನಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದರು.
ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬೊಳ್ಳಾರಂ, ಬೇಗಂ ಬಜಾರ್ ಮತ್ತು ಮುಶೀರಾಬಾದ್ ಪೊಲೀಸ್ ಠಾಣೆಗಳಿಗೆ ಕರೆದೊಯ್ದು ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.