ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರ ಸದೆಬಡೆದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಬಾರಾಮುಲ್ಲಾದ ವಾನಿಗಂ ಪಯೀನ್ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.

ಸ್ಥಳಕ್ಕೆ ಭದ್ರತಾಪಡೆಗಳು ತೆರಳಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ವೇಳೆ ಸ್ಥಳವನ್ನು ಸುತ್ತುವರೆದ ಯೋಧರು, ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಹತ್ಯೆಯಾದ ಇಬ್ಬರು ಸ್ಥಳೀಯ ಉಗ್ರರೆಂದು ಹೇಳಲಾಗುತ್ತಿದ್ದು, ಶೋಪಿಯಾನ್ ಜಿಲ್ಲೆಯ ಶಕೀಸ್ ಮಸೀದ್ ನಜರ್ ಮತ್ತು ಹನಾನ್ ಅಹ್ಮದ್ ಶೆಹ್ ಎಂದು ಗುರ್ತಿಸಲಾಗಿದೆ.

ಇಬ್ಬರೂ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, 2023ರ ಮಾರ್ಚ್ ತಿಂಗಳಿನಲ್ಲಿ ಇಬ್ಬರು ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದರು ಎಂದು ಕಾಶ್ಮೀರದ ಎಡಿಜಿಪಿ ಮಾಹಿತಿ ನೀಡಿದ್ದಾರೆ.

ಹತ್ಯೆಯಾದ ಉಗ್ರರಿಂದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಹಾಗೂ ಎಕೆ 47 ರೈಫಲ್ಸ್ ಹಾಗೂ ಒಂದು ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com