
ಬಿಜೆಪಿ ಕಾರ್ಯಕರ್ತರ ವಶಕ್ಕೆ ಪಡೆಯುತ್ತಿರುವ ಪೊಲೀಸರು.
ಹೈದರಾಬಾದ್: ಅಧಿಕಾರಕ್ಕೆ ಬಂದರೆ, ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ನೀಡಿರುವ ಭರವಸೆಗೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ವಿವಾದವನ್ನು ಸೃಷ್ಟಿ ಮಾಡಿದ್ದು, ಹಿಂದೂ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿವೆ.
ಇದನ್ನೂ ಓದಿ: ಬಜರಂಗದಳ ಬ್ಯಾನ್: ಯಾವುದೇ ಸಂಘ ಸಂಸ್ಥೆ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ- ಜಗದೀಶ್ ಶೆಟ್ಟರ್
ಹೈದರಾಬಾದ್ ನಲ್ಲೂ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹನುಮಾನ್ ಚಾಲೀಸಾ ಪಠಣೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನೆ ಹತ್ತಿಕ್ಕಲು ಯತ್ನಿಸಿದ್ದಾರೆ.
#WATCH | Police detained BJP workers who gathered outside the Congress party office in Hyderabad to recite Hanuman Chalisa amid a row over the Congress manifesto mentioning the ban on Bajrang Dal pic.twitter.com/VFM3Xl4UD9
— ANI (@ANI) May 5, 2023
ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.