ಕೋವಿಡ್-19 ಇಳಿಕೆ: ದೇಶದಲ್ಲಿಂದು 2,961 ಹೊಸ ಸೋಂಕು ಪ್ರಕರಣ, 17 ಮಂದಿ ಸಾವು
ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,961 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 30,041ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
Published: 06th May 2023 11:47 AM | Last Updated: 06th May 2023 03:26 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,961 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 30,041ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೇರಳದಲ್ಲಿ 9 ಮಂದಿ ಸೇರಿದಂತೆ ದೇಶದಾದ್ಯಂತ 17 ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,31,659 ಮಂದಿ ಪ್ರಾಣಕಳೆದುಕೊಂಡಿದ್ದಾರೆ.
COVID-19 | India records 2,961 new cases in 24 hours;
Active caseload at 30,041#COVID19— ANI (@ANI) May 6, 2023
ಈವರೆಗೆ ದೇಶದಲ್ಲಿ ಒಟ್ಟು 4,49,67,250 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಇದೇ ವೇಳೆ ದೇಶದಾದ್ಯಂತ 4,44,05,550 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.07ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.75 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಕೋವಿಡ್-19 ಇನ್ನು ಮುಂದೆ ಆರೋಗ್ಯ ತುರ್ತು ಪರಿಸ್ಥಿತಿಯಲ್ಲ: ಡಬ್ಲ್ಯುಹೆಚ್ ಒ
ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ. ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.