ರಜೌರಿ, ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಹಾಗೂ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
Published: 06th May 2023 08:18 AM | Last Updated: 06th May 2023 04:19 PM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಹಾಗೂ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.
ಸ್ಥಳಕ್ಕೆ ಭದ್ರತಾಪಡೆಗಳು ತೆರಳಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಈ ವೇಳೆ ಸ್ಥಳವನ್ನು ಸುತ್ತುವರೆದ ಯೋಧರು, ಎನ್ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಹತ್ಯೆಗೀಡಾದ ಭಯೋತ್ಪಾದಕನನ್ನು ಕುಲ್ಗಾಮ್ ನಿವಾಸಿ ಅಬಿದ್ ವಾನಿ ಎಂದು ಗುರುತಿಸಲಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಈತ ಸಂಪರ್ಕ ಹೊಂದಿದ್ದನೆಂದು ವರದಿಗಳು ತಿಳಿಸಿವೆ. ಹತ್ಯೆಯಾದ ಉಗ್ರನಿಂದ 1 ಎಕೆ 47 ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭಯೋತ್ಪಾದಕರಿಂದ ಸ್ಫೋಟ; ಐವರು ಯೋಧರು ಹುತಾತ್ಮ
ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ವರದಿಗಳು ತಿಳಿಸಿವೆ.
ಇನ್ನು ರಜೌರಿಯಲ್ಲಿ ಎನ್ಕೌಂಟರ್ ನಡೆಸಿರುವ ಭಾರತೀಯ ಸೇನಾಪಡೆಗಳು, ಮತ್ತೋರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಎನ್ಕೌಂಟರ್ ನಲ್ಲಿ ಮತ್ತೋರ್ವ ಉಗ್ರನಿಗೆ ಗಾಯಗೊಂಡಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹತ್ಯೆಯಾದ ಉಗ್ರರಿಂದ 1 ಎಕೆ 56, 56 ಸುತ್ತುಗಳ ಎಕೆ, 1x9 ಎಂಎಂ ಪಿಸ್ತೂಲ್ ವಿತ್ ಮ್ಯಾಗ್, 3 ಗ್ರೆನೇಡ್ ಮತ್ತು 1 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾಪಡೆ ಮಾಹಿತಿ ನೀಡಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.