ಹಿಂಸಾಚಾರ ಪೀಡಿತ ಮಣಿಪುರಕ್ಕೆ ಹೆಚ್ಚಿನ ಭದ್ರತಾ ಪಡೆ ರವಾನೆ: ಅಮಿತ್ ಶಾ ಪರಿಸ್ಥಿತಿ ಅವಲೋಕನ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಭದ್ರತಾ ಪಡೆಗಳ ನಿಯೋಜನೆ ಹೆಚ್ಚಿಸಲು ಭಾರತೀಯ ವಾಯುಪಡೆ ಅಸ್ಸಾಂ ವಾಯುನೆಲೆಯಿಂದ ನಿರಂತರವಾಗಿ ಸೇನಾ ತುಕಡಿಯನ್ನು ರವಾನಿಸುತ್ತಿದ್ದರೂ ಕೇಂದ್ರ ಸರ್ಕಾರ 355 ವಿಧಿ ಜಾರಿ ಮೂಲಕ ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳುತ್ತಿದೆ.
ಹಿಂಸಾಚಾರ ಭುಗಿಲೆದ್ದ ನಂತರ ಕಾರುಗಳಿಗೆ ಬೆಂಕಿ ಹಚ್ಚಿರುವ ಚಿತ್ರ
ಹಿಂಸಾಚಾರ ಭುಗಿಲೆದ್ದ ನಂತರ ಕಾರುಗಳಿಗೆ ಬೆಂಕಿ ಹಚ್ಚಿರುವ ಚಿತ್ರ
Updated on

ಗುವಾಹಟಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಭದ್ರತಾ ಪಡೆಗಳ ನಿಯೋಜನೆ ಹೆಚ್ಚಿಸಲು ಭಾರತೀಯ ವಾಯುಪಡೆ ಅಸ್ಸಾಂ ವಾಯುನೆಲೆಯಿಂದ ನಿರಂತರವಾಗಿ ಸೇನಾ ತುಕಡಿಯನ್ನು ರವಾನಿಸುತ್ತಿದ್ದರೂ ಕೇಂದ್ರ ಸರ್ಕಾರ 355 ವಿಧಿ ಜಾರಿ ಮೂಲಕ ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳುತ್ತಿದೆ. 355 ನೇ ವಿಧಿಯು ಆಂತರಿಕ ಅಡಚಣೆಗಳು ಮತ್ತು ಬಾಹ್ಯ ಆಕ್ರಮಣಗಳ ವಿರುದ್ಧ ರಾಜ್ಯವನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರಕ್ಕೆ ಅಧಿಕಾರ ನೀಡುತ್ತದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಚುನಾವಣಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ಮಣಿಪುರದಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ  (ಗುಪ್ತಚರ) ಅಶುತೋಷ್ ಸಿನ್ಹಾ ಎಲ್ಲಾ ಕಾರ್ಯಾಚರಣೆಗಳ ಕಮಾಂಡರ್ ಆಗಿ ರಾಜ್ಯ ಸರ್ಕಾರ ನೇಮಿಸಿದೆ. ಅವರು  ಭದ್ರತಾ ಸಲಹೆಗಾರರಾಗಿ ನೇಮಕಗೊಂಡಿರುವ ಮಾಜಿ ಸಿಆರ್‌ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ ಅವರಿಗೆ ವರದಿ ಮಾಡುತ್ತಾರೆ.

ರಾಜ್ಯ ರಾಜಧಾನಿ ಇಂಫಾಲ್‌ನಲ್ಲಿ ಗುರುವಾರ ದುಷ್ಕರ್ಮಿಗಳ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಿಜೆಪಿ ಶಾಸಕ ವುಂಗ್‌ಜಾಗಿನ್ ವಾಲ್ಟೆ ಅವರನ್ನು ಶುಕ್ರವಾರ ದೆಹಲಿಗೆ ಕರೆದೊಯ್ಯಲಾಯಿತು. ಹಿಂಸಾಚಾರ ಪೀಡಿತ ಜಿಲ್ಲೆಗಳಲ್ಲಿ ಕರ್ಫ್ಯೂ ಮುಂದುವರಿದಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮಣಿಪುರಕ್ಕೆ ಪ್ರಯಾಣಿಸುವ ಎರಡು ರೈಲುಗಳನ್ನು ಅಸ್ಸಾಂನಲ್ಲಿ ರೈಲ್ವೆ ಅಧಿಕಾರಿಗಳು ಅಲ್ಪಾವಧಿಗೆ ಸ್ಥಗಿತಗೊಳಿಸಿದ್ದಾರೆ. 

ಶುಕ್ರವಾರ ಕೆಲವು ಕಡೆ ಹಿಂಸಾಚಾರದ ಘಟನೆಗಳು ನಡೆದಿವೆ ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸೇನೆ ತಿಳಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ತೀವ್ರ ಪ್ರಕರಣಗಳಲ್ಲಿ ಕಂಡಲ್ಲಿ ಗುಂಡು ಆದೇಶ ಹೊರಡಿಸಿದೆ. ಎಲ್ಲಾ ಪಾಲುದಾರರ ಸಂಘಟಿತ ಕ್ರಮಗಳ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅಸ್ಸಾಂನ ವಾಯುನೆಲೆಯಿಂದ ನಿರಂತರವಾಗಿ ಸೈನಿಕರನ್ನು ಐಎಎಫ್ ರವಾನಿಸುತ್ತಿದೆ

ರಕ್ಷಣಾ ಹೇಳಿಕೆಯು, “ಎಲ್ಲಾ ಮಧ್ಯಸ್ಥಗಾರರ ಸಂಘಟಿತ ಕ್ರಮಗಳ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಭಾರತೀಯ ವಾಯುಪಡೆ ಅಸ್ಸಾಂ ವಾಯುನೆಲೆಯಿಂದ ನಿರಂತರವಾಗಿ ಸೇನಾ ತುಕಡಿಯನ್ನು ರವಾನಿಸುತ್ತಿದೆ ಎಂದು ರಕ್ಷಣಾ ಹೇಳಿಕೆಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com