ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ?; ಅಡ್ಡಗೋಡೆ ಮೇಲೆ ದೀಪ ಇಟ್ಟ ಪಾಕ್ ಸಚಿವ 'ಭುಟ್ಟೋ'!
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮತ್ತೆ ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದು, ಪಾಕಿಸ್ತಾನ ದ್ವಂದ್ವ ನೀತಿಯನ್ನು ಜಗಜ್ಜಾಹಿರು ಮಾಡಿದ್ದಾರೆ.
Published: 06th May 2023 06:40 PM | Last Updated: 06th May 2023 06:40 PM | A+A A-

ಬಿಲಾವಲ್ ಭುಟ್ಟೋ
ಪಣಜಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮತ್ತೆ ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದು, ಪಾಕಿಸ್ತಾನ ದ್ವಂದ್ವ ನೀತಿಯನ್ನು ಜಗಜ್ಜಾಹಿರು ಮಾಡಿದ್ದಾರೆ.
ಶಾಂಘೈ ಸಹಕಾರ ಸಂಘಟನೆ (ಎಸ್‍ಸಿಒ) ಕೌನ್ಸಿಲ್ ಸಭೆಗಾಗಿ ಗೋವಾದಲ್ಲಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾತನಾಡಿದರು. ಈ ವೇಳೆ ಕರಾಚಿ ಮೂಲದ ಭೂಗತ ಡಾನ್ ದಾವೂದ್ ಇಬ್ರಾಹಿಂನ ಹಸ್ತಾಂತರವು ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುತ್ತದೆ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
How do we trust you to act on terror when Dawood Ibrahim lives in the same Clifton colony as you in Karachi? Did @BBhuttoZardari have an answer. Watch here | @Sardesairajdeep pic.twitter.com/8nkCxuOFcQ
— IndiaToday (@IndiaToday) May 5, 2023
ಸಂದರ್ಶನದಲ್ಲಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ಹಸ್ತಾಂತರಿಸುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಶಮನವಾಗುತ್ತದೆಯೇ ಎಂದು ಸುದ್ದಿಗಾರರು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಬಿಲಾವಲ್, “ಹೆಚ್ಚಿರುವ ಅಶಾಂತಿಯು ಆಗಸ್ಟ್ 5, 2019 ರಂದು ಭಾರತದ ಕ್ರಮದ (ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ) ಪರಿಣಾಮವಾಗಿದೆ. ಆ ಸಮಯದಲ್ಲಿ, ಭಾರತ ಏಕಪಕ್ಷೀಯವಾಗಿ ಅಂತಾರಾಷ್ಟ್ರೀಯ ಕಾನೂನು, ನಿರ್ಣಯಗಳು ಮತ್ತು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಒಪ್ಪಂದಗಳನ್ನು ಉಲ್ಲಂಘಿಸಿದೆ” ಎಂದು ಹೇಳಿದರು.
ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಕಟುಕ ಎಂದಿದ್ದ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಭಾರತಕ್ಕೆ ಭೇಟಿ!
“ನಾವು ಯಾವುದೇ ಬದ್ಧತೆಯನ್ನು ಪೂರೈಸಲು ಬಯಸಿದರೆ ಅಥವಾ ನಾವು ಎರಡೂ ದೇಶಗಳ ನಡುವೆ ಯಾವುದೇ ಮಾತುಕತೆ ನಡೆಸಲು ಬಯಸಿದರೆ, ಲಿಖಿತ ದಾಖಲೆಗಳು ಅಥವಾ ಲಿಖಿತ ಒಪ್ಪಂದಗಳು ಇರುತ್ತವೆ. ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಒಪ್ಪಂದಗಳಿಗೆ ಭಾರತದ ಬದ್ಧತೆಯನ್ನು ಪಾಕಿಸ್ತಾನ ನಂಬುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.