ಮೇಘಾಲಯ: ಬಿಎಸ್ಎಫ್ ನಿಂದ ಜಾನುವಾರು ಸಾಗಿಸುತ್ತಿದ್ದ ಟ್ರಕ್ ಚಾಲಕನ ಹತ್ಯೆ

ಮೇಘಾಲಯದ ಪೂರ್ವ ಖಾಸಿ ಹಿಲ್ಸ್‌ನಲ್ಲಿ ಜಾನುವಾರಗಳನ್ನು ಸಾಗಿಸುತ್ತಿದ್ದ 32 ವರ್ಷದ ಟ್ರಕ್ ಚಾಲಕನನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್ ) ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿಲ್ಲಾಂಗ್: ಮೇಘಾಲಯದ ಪೂರ್ವ ಖಾಸಿ ಹಿಲ್ಸ್‌ನಲ್ಲಿ ಜಾನುವಾರಗಳನ್ನು ಸಾಗಿಸುತ್ತಿದ್ದ 32 ವರ್ಷದ ಟ್ರಕ್ ಚಾಲಕನನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್ ) ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮೌಶುನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚೆಕ್ ಪೋಸ್ಟ್‌ನಲ್ಲಿ ಕಾವಲು ಕಾಯುತ್ತಿದ್ದ ಬಿಎಸ್‌ಎಫ್ ಸಿಬ್ಬಂದಿ ಶನಿವಾರ ಟ್ರಕ್ ಮೇಲೆ ಗುಂಡು ಹಾರಿಸಿದ್ದು, ಚಾಲಕ ರೋನಿಂಗ್ ನಾಂಗ್‌ಕಿನ್ರಿಹ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೌಶುನ್ ಭಾರತ-ಬಾಂಗ್ಲಾದೇಶ ಗಡಿಯಿಂದ 17 ಕಿ.ಮೀ. ದೂರವಿದ್ದು, ಗಡಿ ಭದ್ರತಾ ಪಡೆ ಘಟನೆ ಕುರಿತು ಕೋರ್ಟ್ ತನಿಖೆಗೆ ಆದೇಶಿಸಿದೆ.

ಚಾಲಕ ತಮ್ಮ ಮೇಲೆ ಟ್ರಕ್‌ ಹರಿಸಬಹುದು ಎಂಬ ಭಯದಿಂದ ಆತ್ಮರಕ್ಷಣೆಗಾಗಿ ಈ ಕೃತ್ಯವೆಸಗಿದ್ದೇವೆ ಎಂದು ಆರೋಪಿ ಬಿಎಸ್ಎಫ್ ಸಿಬ್ಬಂದಿ ಹೇಳಿದ್ದಾರೆ.

ಟ್ರಕ್‌ನಲ್ಲಿದ್ದ ಮೃತ ಚಾಲಕನ ಸೋದರ ಸಂಬಂಧಿ ರಿಬಲ್ಸ್‌ಕೆಮ್ ನಾಂಗ್‌ಕಿನ್ರಿಹ್, ಬಿಎಸ್‌ಎಫ್ ಸಿಬ್ಬಂದಿ ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

"ಇದೊಂದು ದುರದೃಷ್ಟಕರ ಘಟನೆ. ನಾವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302(ಕೊಲೆ) ಅಡಿಯಲ್ಲಿ ಪ್ರಕರಣವನ್ನು ಪೈನೂರ್‌ಸ್ಲಾ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಈಸ್ಟ್ ಖಾಸಿ ಹಿಲ್ಸ್ ಜಿಲ್ಲಾ ಪೊಲೀಸ್ ಅಧೀಕ್ಷಕ ಎಸ್ ನೋಂಗ್ಟ್‌ಗರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com