ರಾಜಸ್ಥಾನದಲ್ಲಿ ಭಾರತೀಯ ಸೇನೆಯ ಮಿಗ್ ವಿಮಾನ ಅಪಘಾತ: ಮೂವರು ಸಾವು, ಪೈಲಟ್ ಪ್ರಾಣಾಪಾಯದಿಂದ ಪಾರು

ಭಾರತೀಯ ವಾಯುಪಡೆಯ MiG ವಿಮಾನ ಸೋಮವಾರ ರಾಜಸ್ಥಾನದಲ್ಲಿ ಪತನವಾಗಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಗ್ರಾಮಸ್ಥರು ಸಾವನ್ನಪ್ಪಿದ್ದರೆ, ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಮಿಗ್ ವಿಮಾನ ಅಪಘಾತ
ಮಿಗ್ ವಿಮಾನ ಅಪಘಾತ

ಬಾರ್ಮರ್: ಭಾರತೀಯ ವಾಯುಪಡೆಯ MiG ವಿಮಾನ ಸೋಮವಾರ ರಾಜಸ್ಥಾನದಲ್ಲಿ ಪತನವಾಗಿದ್ದು, ಈ ದುರ್ಘಟನೆಯಲ್ಲಿ ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದರೆ, ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜಸ್ಥಾನದ ಹಮುಮಾನ್‌ಗಢ ಜಿಲ್ಲೆಯಲ್ಲಿ ಪತನಗೊಂಡಿದೆ ಎಂದು ರಕ್ಷಣಾ ಮೂಲಗಳು ತಿಳಿಸಿದ್ದು, ದುರ್ಘಟನೆಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಂತೆಯೇ ವಿಮಾನದ ಪೈಲಟ್ ಸುರಕ್ಷಿತವಾಗಿ ಇಳಿದಿದ್ದು, ರಕ್ಷಣಾ ಕಾರ್ಯಕ್ಕಾಗಿ ಸೇನಾ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ದೌಡಾಯಿಸಿದೆ.

ಐಎಎಫ್ ಮೂಲಗಳ ಪ್ರಕಾರ ಅಪಘಾತಕ್ಕೀಡಾದ ಮಿಗ್ ವಿಮಾನವು ಸೂರತ್‌ಗಢದಿಂದ ಟೇಕ್ ಆಫ್ ಆಗಿತ್ತು. ಆದರೆ ಟೇಕ್ ಆಫ್ ಆದ ಕೆಲವೇ ಕ್ಷಣಗಳ ಬಳಿಕ ಸಂಪರ್ಕ ಕಡಿತಗೊಂಡಿತ್ತು. ಇದೀಗ ವಿಮಾನ ಪತನವಾಗಿದೆ.

ಈಗ್ಗೆ ಜನವರಿಯಲ್ಲಿ, ರಾಜಸ್ಥಾನದ ಭರತ್‌ಪುರದಲ್ಲಿ ತರಬೇತಿ ಅಭ್ಯಾಸದ ವೇಳೆ ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು - ಸುಖೋಯ್ ಸು -30 ಮತ್ತು ಮಿರಾಜ್ 2000 - ಪತನಗೊಂಡು ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದರು. ಒಂದು ವಿಮಾನ ಮಧ್ಯಪ್ರದೇಶದ ಮೊರೆನಾದಲ್ಲಿ ಪತನವಾದರೆ, ಇನ್ನೊಂದು ವಿಮಾನ ಪತನಗೊಂಡು ರಾಜಸ್ಥಾನದ ಭರತ್‌ಪುರದಲ್ಲಿ  ಪತನವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com