ಅಬಕಾರಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 23 ರವರೆಗೆ ವಿಸ್ತರಣೆ
ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 23 ರವರೆಗೆ ಸೋಮವಾರ ವಿಸ್ತರಿಸಿದೆ.
Published: 08th May 2023 08:50 PM | Last Updated: 08th May 2023 08:51 PM | A+A A-

ಮನೀಶ್ ಸಿಸೋಡಿಯಾ
ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 23 ರವರೆಗೆ ಸೋಮವಾರ ವಿಸ್ತರಿಸಿದೆ.
ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಎಎಪಿ ನಾಯಕನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬಳಿಕ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರು ಬಂಧನವನ್ನು ವಿಸ್ತರಿಸಿದರು.
ಜಾರಿ ನಿರ್ದೇಶನಾಲಯ ಆರೋಪಿ ವಿರುದ್ಧ ಪೂರಕ ಚಾರ್ಜ್‌ಶೀಟ್ ಸಲ್ಲಿಸಿದ್ದು, ಅದನ್ನು ಮೇ 10 ರಂದು ಪರಿಗಣಿಸಲು ನಿಗದಿಯಾಗಿದೆ ಎಂಬ ಜಾರಿ ನಿರ್ದೇಶನಾಲಯದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್‌ಕೆ ಮಟ್ಟಾ ಅವರ ವಾದವನ್ನು ನ್ಯಾಯಾಲಯ ಆಲಿಸಿತು.
ಈ ಹಿಂದೆ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಅಲ್ಲದೇ ತನಿಖೆ ಸಮಯದಲ್ಲಿ ಸಂಗ್ರಹಿಸಿದ ಸಾಕ್ಷ್ಯವು ಅವರು ಕಮಿಷನ್ ಅಪರಾಧದಲ್ಲಿ ಭಾಗಿಯಾಗಿರುವುದನ್ನು ಹೇಳುವುದರಿಂದ ಆರ್ಥಿಕ ಅಪರಾಧಗಳ ಪ್ರಕರಣ ಸಾಮಾನ್ಯ ಸಾರ್ವಜನಿಕ ಮತ್ತು ಸಮಾಜದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಮದ್ಯ ನೀತಿ ಪ್ರಕರಣದಲ್ಲಿ ಮಾರ್ಚ್ 9 ರಂದು ಸಿಸೋಡಿಯಾ ಅವರನ್ನು ಇಡಿ ಬಂಧಿಸಿತ್ತು.