ಮಹಾರಾಷ್ಟ್ರ: 'ವಿಲಕ್ಷಣ' ನನ್ನನ್ನು ಸಮಾಜ ಒಪ್ಪಿಕೊಳ್ಳುವುದಿಲ್ಲ ಎಂಬ ಭಯದಿಂದ ಯುವತಿ ಆತ್ಮಹತ್ಯೆಗೆ ಶರಣು!
ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ 18 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Published: 08th May 2023 09:08 PM | Last Updated: 08th May 2023 09:08 PM | A+A A-

ಸಂಗ್ರಹ ಚಿತ್ರ
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ 18 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಂತ್ರಸ್ತೆ, ಆತ್ಮಹತ್ಯೆ ಪತ್ರದಲ್ಲಿ, ತಾನು ವಿಲಕ್ಷಣವಾಗಿದ್ದು ಸಮಾಜವು ಒಪ್ಪಿಕೊಳ್ಳುವುದಿಲ್ಲ ಎಂಬ ಭಯವನ್ನು ಬಹಿರಂಗಪಡಿಸಿದ್ದಾಳೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ಗಿಟ್ಟಿಖಾದನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆ ಈ ಕೃತ್ಯ ಎಸಗಿದ್ದಾಳೆ.
ಮನೆಗೆ ಹಿಂದಿರುಗಿದ ನಂತರ ಬಾಲಕಿಯ ಪೋಷಕರು ಆಕೆಯ ಶವವನ್ನು ಕಂಡು ಆಸ್ಪತ್ರೆಗೆ ಸಾಗಿಸಿದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಸಾವನ್ನಪ್ಪಿರುವುದಾಗಿ ಘೋಷಿಸಿದರು. ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.