ಪ್ರತಿಪಕ್ಷಗಳನ್ನು ಒಗ್ಗೂಡಿಸವ ಯತ್ನ: ಮೇ 9 ರಂದು ನಿತೀಶ್ ಕುಮಾರ್ ರಿಂದ ನವೀನ್ ಪಟ್ನಾಯಕ್ ಭೇಟಿ
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೇ 9 ರಂದು ಒಡಿಶಾ ಮುಖ್ಯಮಂತ್ರಿ ಮತ್ತು ಮತ್ತೊಬ್ಬ ಪ್ರಾದೇಶಿಕ ಪಕ್ಷದ...
Published: 08th May 2023 10:21 AM | Last Updated: 08th May 2023 10:21 AM | A+A A-

ನಿತೀಶ್ ಕುಮಾರ್
ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೇ 9 ರಂದು ಒಡಿಶಾ ಮುಖ್ಯಮಂತ್ರಿ ಮತ್ತು ಮತ್ತೊಬ್ಬ ಪ್ರಾದೇಶಿಕ ಪಕ್ಷದ ಪ್ರಬಲ ವ್ಯಕ್ತಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ.
ಈ ಮುಂಚೆ ಮೇ 5 ರಂದು ಪಟ್ನಾಯಕ್ ಅವರನ್ನು ಭೇಟಿ ಮಾಡಲು ನಿತೀಶ್ ನಿರ್ಧರಿಸಿದ್ದರು. ಆದರೆ ಒಡಿಶಾ ಮುಖ್ಯಮಂತ್ರಿಯ ಬಿಡುವಿಲ್ಲದ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಉಭಯ ನಾಯಕ ಭೇಟಿಯನ್ನು ಮೇ 9 ಕ್ಕೆ ಮುಂದೂಡಲಾಗಿದೆ.
ಇದನ್ನು ಓದಿ: 2024ರ ಹಾದಿ: ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಯತ್ನದಲ್ಲಿ ನಿತೀಶ್; ಶೀಘ್ರದಲ್ಲೇ ಪಟ್ನಾಯಕ್, ಕೆಸಿಆರ್ ಭೇಟಿ
ಬಿಜೆಪಿಯ ವೇಗಕ್ಕೆ ಬ್ರೇಕ್ ಹಾಕಲು ನಿತೀಶ್ ಕುಮಾರ್ ಅವರು ಸಾಧ್ಯವಾದಷ್ಟು ವಿರೋಧ ಪಕ್ಷಗಳ ಒಟ್ಟುಗೂಡಿಸುವ ತಮ್ಮ ಪ್ರಯತ್ನ ಮುಂದುವರೆಸಿದ್ದಾರೆ. ಈ ನಿಟ್ಟಿನಲ್ಲಿ, ನಿತೀಶ್ ಕುಮಾರ್ ಮತ್ತು ಅವರ ಉಪ ಮುಖ್ಯಮಂತ್ರಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದರು.