ಕರ್ನಾಟಕ ವಿಧಾನಸಭೆ ಚುನಾವಣೆ: ಮತದಾನ ಹಿನ್ನೆಲೆ ಮೇ 10ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು, ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವರರಿಗೆ ಗೋವಾ ಸರ್ಕಾರ ವೇತನಸಹಿತ ರಜೆ ನೀಡಿ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಗೋವಾ ಮುಖ್ಯಮಂತ್ರಿ ಸಿಎಂ ಪ್ರಮೋದ್ ಸಾವಂತ್
ಗೋವಾ ಮುಖ್ಯಮಂತ್ರಿ ಸಿಎಂ ಪ್ರಮೋದ್ ಸಾವಂತ್

ಪಣಜಿ(ಗೋವಾ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು, ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವರರಿಗೆ ಗೋವಾ ಸರ್ಕಾರ ವೇತನಸಹಿತ ರಜೆ ನೀಡಿ ಸೋಮವಾರ ಅಧಿಸೂಚನೆ ಹೊರಡಿಸಿದೆ.

ಗೋವಾ ಮುಖ್ಯಮಂತ್ರಿ ಸಿಎಂ ಪ್ರಮೋದ್ ಸಾವಂತ್ ಸರ್ಕಾರ ಈ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಗೆ ವಿರೋಧ ಪಕ್ಷಗಳು ಮತ್ತು ಖಾಸಗಿ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿವೆ. ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಗೋವಾ ಸ್ಟೇಟ್​ ಇಂಡಸ್ತ್ರೀಸ್​ ಅಸೋಸಿಯೇಶನ್ ವಿರೋಧ ವ್ಯಕ್ತಪಡಿಸಿದೆ.

ಗೋವಾ ರಾಜ್ಯ ಕೈಗಾರಿಕೆಗಳ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದು, "ಇದು ಸಂಪೂರ್ಣ ಅಸಂಬದ್ಧವಾದದ್ದು. ಮೂರ್ಖತನದ ತೀರ್ಮಾನವಾಗಿದೆ ಎಂದು ಹೇಳಿದ್ದಾರೆ.

ಚುನಾವಣಾ ಲಾಭಕ್ಕಾಗಿ ಕೈಗಾರಿಕೆಗಳನ್ನು ಸುಲಿಗೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇಂತಹ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಕಾನೂನಿನ ಮೊರೆ ಹೋಗಬೇಕಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com