
ವಿದೇಶಾಂಗ ಸಚಿವ ಜೈಶಂಕರ್ ಅವರಿಂದಿಗೆ ಇಸ್ರೇಲ್ ವಿದೇಶಾಂಗ ಸಚಿವ
ನವದೆಹಲಿ: ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದ ಇಸ್ರೇಲ್ ನ ವಿದೇಶಾಂಗ ಸಚಿವ ಎಲಿ ಕೊಹೆನ್ ಪ್ರವಾಸವನ್ನು ಮೊಟಕುಗೊಳಿಸುತ್ತಿರುವುದಾಗಿ ಘೋಷಿಸಿದ್ದಾರೆ.
ನವದೆಹಲಿಗೆ ಆಗಮಿಸಿದ ಬಳಿಕ ಗಾಜಾ ಪಟ್ಟಿಯಲ್ಲಿ ಉಗ್ರ ಸಂಘಟನೆಯ ವಿರುದ್ಧ ಟೆಲ್ ಅವೀವ್ ನ ಕಾರ್ಯಾಚರಣೆಯ ವಿಷಯವಾಗಿ ಭದ್ರತಾ ಅಪ್ಡೇಟ್ ಬಂದ ಹಿನ್ನೆಲೆಯಲ್ಲಿ ತಾವು ಪ್ರವಾಸವನ್ನು ಮೊಟಕುಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.
ವ್ಯಾಪಾರ, ಹೂಡಿಕೆ, ರಕ್ಷಣೆ ಮತ್ತು ಕೃಷಿ ಸೇರಿದಂತೆ ವಿವಿಧ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯವನ್ನು ವಿಸ್ತರಿಸುವ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ ಇಸ್ರೇಲ್ ಪ್ರವಾಸಿ ಸಚಿವರು, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ಸ್ವದೇಶಕ್ಕೆ ಮರಳುವುದಾಗಿ ಹೇಳಿದ್ದಾರೆ.
ಭಾರತ-ಇಸ್ರೇಲ್ ಉದ್ಯಮ ಫೋರಂನಲ್ಲಿ ಭಾಷಣ ಮಾಡಿದ ಕೊಹೆನ್, ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ವಿಷಯವನ್ನು ಪ್ರಧಾನಿ ಮೋದಿ ಅವರೊಂದಿಗೆ ಪ್ರಸ್ತಾಪಿಸುವುದಾಗಿ ಹೇಳಿದರು.