ಮಧ್ಯ ಪ್ರದೇಶ: ಸೇತುವೆಯಿಂದ ಕೆಳಗೆ ಬಿದ್ದ ಬಸ್, 15 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ರೂ.4 ಲಕ್ಷ ರೂ. ಪರಿಹಾರ
ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಮಂಗಳವಾರ ನಡೆದಿದೆ.
Published: 09th May 2023 10:54 AM | Last Updated: 09th May 2023 05:08 PM | A+A A-

ಸೇತುವೆಯಿಂದ ಕೆಳಗೆ ಬಿದ್ದಿರುವ ಬಸ್.
ನವದೆಹಲಿ: ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಮಂಗಳವಾರ ನಡೆದಿದೆ.
ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ವರದಿಗಳು ತಿಳಿದಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಮಣಿಪುರ ಹಿಂಸಾಚಾರ: 60 ಸಾವು, 231 ಮಂದಿಗೆ ಗಾಯ, 1700 ಮನೆಗಳಿಗೆ ಬೆಂಕಿ; ಶಾಂತಿ ಸ್ಥಾಪನೆಗಾಗಿ ಸಿಎಂ ಮನವಿ
ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ತಲಾ ರೂ.4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ರೂ.25 ಸಾವಿರ ಪರಿಹಾರವನ್ನು ಘೋಷಣೆ ಮಾಡಿದೆ.