ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟಿ ರಾಖಿ ಸಾವಂತ್ ಸಹೋದರ ಬಂಧನ
ಹಳೆಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಾಖಿ ಸಾವಂತ್ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸ್ಥಳೀಯ ನ್ಯಾಯಾಲಯ ವಾರಂಟ್ ಹೊರಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 09th May 2023 09:06 PM | Last Updated: 09th May 2023 09:06 PM | A+A A-

ರಾಕಿ ಸಾವಂತ್
ಮುಂಬೈ: ಹಳೆಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಾಖಿ ಸಾವಂತ್ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸ್ಥಳೀಯ ನ್ಯಾಯಾಲಯ ವಾರಂಟ್ ಹೊರಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಕೇಶ್ ಸಾವಂತ್ ಅವರನ್ನು ಭಾನುವಾರ ಬಂಧಿಸಲಾಗಿತ್ತು. ಆತನನ್ನು ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೇ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2020 ರಲ್ಲಿ ಉದ್ಯಮಿಯೊಬ್ಬರು ರಾಕೇಶ್ ಸಾವಂತ್ ವಿರುದ್ಧ ಚೆಕ್ ಬೌನ್ಸ್ ಆಗಿರುವ ದೂರು ದಾಖಲಿಸಿದ್ದ ನಂತರ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ದೂರುದಾರರ ಹಣವನ್ನು ಹಿಂದಿರುಗಿಸುವ ಭರವಸೆ ಮೇರೆಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಹಣ ಮರಳಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಕೇಶ್ ಆನಂದ್ ಸಾವಂತ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ಅವರನ್ನು ಬಂಧಿಸಲಾಗಿದೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದರು.