'ದಿ ಕೇರಳ ಸ್ಟೋರಿ' ಕುರಿತ ಹೈಕೋರ್ಟ್ ಆದೇಶದ ವಿರುದ್ಧ ಅರ್ಜಿ; ಮೇ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ

ವಿವಾದಾತ್ಮಕ ಬಹುಭಾಷಾ ಚಿತ್ರ 'ದಿ ಕೇರಳ ಸ್ಟೋರಿ' ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶದ ವಿರುದ್ಧದ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮೇ 15 ರಂದು ವಿಚಾರಣೆ ನಡೆಸಲಿದೆ.
ದಿ ಕೇರಳ ಸ್ಟೋರಿ ಚಿತ್ರದ ಪೋಸ್ಟರ್
ದಿ ಕೇರಳ ಸ್ಟೋರಿ ಚಿತ್ರದ ಪೋಸ್ಟರ್

ನವದೆಹಲಿ: ವಿವಾದಾತ್ಮಕ ಬಹುಭಾಷಾ ಚಿತ್ರ 'ದಿ ಕೇರಳ ಸ್ಟೋರಿ' ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶದ ವಿರುದ್ಧದ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮೇ 15 ರಂದು ವಿಚಾರಣೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿಎಸ್ ನರಸಿಂಹ ಅವರನ್ನೊಳಗೊಂಡ ಪೀಠದ ಮುಂದೆ ಹಿರಿಯ ವಕೀಲ ಕಪಿಲ್ ಸಿಬಲ್ ಮಂಗಳವಾರ ತುರ್ತು ವಿಚಾರಣೆಗಾಗಿ ಈ ವಿಷಯವನ್ನು ಪ್ರಸ್ತಾಪಿಸಿದರು.

ಈ ವಿಚಾರದಲ್ಲಿ ಹೈಕೋರ್ಟ್ ಆದೇಶ ಹೊರಡಿಸಿದೆಯೇ ಎಂದು ಪೀಠ ಪ್ರಶ್ನಿಸಿದಾಗ, ಸಿನಿಮಾ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿರುವುದಾಗಿ ಸಿಬಲ್ ಹೇಳಿದರು. 'ನಾವು ಈ ಅರ್ಜಿಯನ್ನು ಸೋಮವಾರ (ಮೇ 15) ವಿಚಾರಣೆಗೆ ಪಟ್ಟಿ ಮಾಡುತ್ತೇವೆ' ಎಂದು ಪೀಠ ಹೇಳಿದೆ.

ಮೇ 5 ರಂದು, ಕೇರಳ ಹೈಕೋರ್ಟ್ ಚಲನಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಚಿತ್ರದ ಟ್ರೇಲರ್‌ನಲ್ಲಿ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿರುವುದು ಕಂಡುಬಂದಿಲ್ಲ ಎಂದು ಹೇಳಿದೆ.

ಕೇರಳದ '32 ಸಾವಿರ ಮಹಿಳೆಯರು' ಮತಾಂತರಗೊಂಡು ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದಾರೆ ಎಂಬ ಹೇಳಿಕೆಯನ್ನು ಹೊಂದಿರುವ 'ಆಕ್ಷೇಪಾರ್ಹ ಟೀಸರ್' ಅನ್ನು ಉಳಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಚಿತ್ರದ ನಿರ್ಮಾಪಕರು ಹೇಳಿರುವುದನ್ನು ಹೈಕೋರ್ಟ್ ಉಲ್ಲೇಖಿಸಿದೆ.

ಚಲನಚಿತ್ರ ಪ್ರಮಾಣಿಕರಣ ಮಂಡಳಿಯು (ಸಿಬಿಎಫ್‌ಸಿ) ಈ ಸಿನಿಮಾವನ್ನು ಪರಿಶೀಲಿಸಿದೆ ಮತ್ತು ಸಾರ್ವಜನಿಕ ಪ್ರದರ್ಶನಕ್ಕೆ ಸೂಕ್ತವಾಗಿದೆ ಎಂದು ಪ್ರಮಾಣಪತ್ರವನ್ನು ನೀಡಿದೆ ಎಂದು ಹೈಕೋರ್ಟ್ ಹೇಳಿದೆ.

ನಿರ್ಮಾಪಕರು, ಈ ಚಿತ್ರವು ಕಾಲ್ಪನಿಕ ಮತ್ತು ನಾಯಕೀಯ ಘಟನೆಗಳನ್ನು ಹೊಂದಿದೆ. ನಿಖರ ಮತ್ತು ಐತಿಹಾಸಿಕ ಘಟನೆಗಳನ್ನು ಹೊಂದಿಲ್ಲ ಎಂದು ನಿರ್ದಿಷ್ಟವಾಗಿ ಹೇಳುವ ಮಾಹಿತಿಯನ್ನು ನಿರ್ಮಾಪಕರು ಚಿತ್ರದಲ್ಲಿ ಅಳವಡಿಸಿಕೊಳ್ಳಲಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

ಅದಾ ಶರ್ಮಾ ಅಭಿನಯದ 'ದಿ ಕೇರಳ ಸ್ಟೋರಿ' ಶುಕ್ರವಾರ (ಮೇ 5) ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com