ರಾಜಸ್ಥಾನ: ಭ್ರಷ್ಟಾಚಾರ, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಸರ್ಕಾರದ ವಿರುದ್ಧ ಸಚಿನ್ ಪೈಲಟ್ 'ಜನ ಸಂಘರ್ಷ' ಯಾತ್ರೆ ಆರಂಭ
ಅಜ್ಮೀರ್: ರಾಜಸ್ಥಾನದಲ್ಲಿನ ಭ್ರಷ್ಟಾಚಾರ ಹಾಗೂ ಶಿಕ್ಷಕರ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ ಹೇರಲು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಜನ ಸಂಘರ್ಷ ಯಾತ್ರೆ ಆರಂಭಿಸಿದ್ದಾರೆ.
ಅಜ್ಮೀರದಿಂದ ಆರಂಭವಾಗಲಿರುವ ಈ ಯಾತ್ರೆ ಐದು ದಿನಗಳ ಕಾಲ ನಡೆಯಲಿದ್ದು, ಜೈಪುರದಲ್ಲಿ ಅಂತ್ಯವಾಗಲಿದೆ. ಇದು ಸುಮಾರು 125 ಕಿ.ಮೀ ದೂರ ಕ್ರಮಿಸಲಿದೆ ಎನ್ನಲಾಗಿದೆ.
ಇದಕ್ಕೂ ಮುನ್ನಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿನ್ ಪೈಲಟ್, ವಿವಿಧ ಸರ್ಕಾರಿ ಹುದ್ದೆಗಳಲ್ಲಿ ನೇಮಕಾತಿಗಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ವಿಷಯ ಪ್ರಸ್ತಾಪಿಸಿದರು. ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಬಂಧಿತರಾಗಿದ್ದ ರಾಜಸ್ಥಾನ ಲೋಕಸೇವಾ ಆಯೋಗದ ಸದಸ್ಯ ಹಾಗೂ ಮತ್ತೋರ್ವ ಆರೋಪಿ ಮೇಲೆ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.
ಯುವ ಜನತೆ ರಾಜ್ಯ ಮತ್ತು ದೇಶದ ಭವಿಷ್ಯ ಎಂದು ಪ್ರತಿಪಾದಿಸಿದ ಪೈಲಟ್, ತಮ್ಮ ಪಾದಯಾತ್ರೆ ಯಾರ ವಿರುದ್ಧವೂ ಅಲ್ಲ, ಭ್ರಷ್ಟಾಚಾರದ ವಿರುದ್ಧ ಮತ್ತು ಯುವಕರ ಹಿತಾಸಕ್ತಿ ಕಾಪಾಡಲು ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ