ಪ್ರಜಾಪ್ರಭುತ್ವಕ್ಕೆ ಸಂದ ಜಯ: ಸುಪ್ರೀಂ ಕೋರ್ಟ್ ತೀರ್ಪು ಕುರಿತು ಫಡ್ನವೀಸ್ ಪ್ರತಿಕ್ರಿಯೆ
ಇದು ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಸಂದ ಜಯ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ನಾವು ತೃಪ್ತರಾಗಿದ್ದೇವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಹೇಳಿದ್ದಾರೆ.
Published: 11th May 2023 02:35 PM | Last Updated: 11th May 2023 02:45 PM | A+A A-

ದೇವೇಂದ್ರ ಫಡ್ನವೀಸ್ ಹಾಗೂ ಏಕನಾಥ್ ಶಿಂಧೆ.
ಮುಂಬೈ: ಇದು ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಸಂದ ಜಯ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ನಾವು ತೃಪ್ತರಾಗಿದ್ದೇವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಹೇಳಿದ್ದಾರೆ.
ಮಹಾರಾಷ್ಟ್ರ ಮೂಲ ಶಿವಸೇನೆಯಿಂದ ಬಂಡಾಯವೆದ್ದು ಏಕನಾಥ ಶಿಂಧೆ ಹಿಂದೆ ಹೋಗಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿ ಕುರಿತು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ.
ತೀರ್ಪು ಕುರಿತು ಏಕನಾಥ್ ಶಿಂಧೆ ಜೊತೆಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಫಡ್ನವೀಸ್ ಅವರು ಮಾತನಾಡಿದರು.
ಇದನ್ನೂ ಓದಿ: ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು: ಉದ್ಧವ್ ಠಾಕ್ರೆ
ಇದು ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಸಂದ ಜಯ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ನಾವು ತೃಪ್ತರಾಗಿದ್ದೇವೆ, ಮಹಾ ವಿಕಾಸ್ ಅಘಾಡಿ (ಎಂವಿಎ) ನಡೆಸುತ್ತಿದ್ದ ಪಿತೂರಿಗಿಂದು ಸೋಲಾಗಿದೆ. ಇನ್ನು ಮುಂದೆ ಮಹಾರಾಷ್ಟ್ರ ಸರ್ಕಾರವು ಸಂಪೂರ್ಣವಾಗಿ ಕಾನೂನುಬದ್ಧವಾಗಿದ್ದು, ಯಾರೂ ಅನುಮಾನಿಸುವಂತಿಲ್ಲ ಎಂದು ಹೇಳಿದ್ದಾರೆ.
ನೈತಿಕತೆಯ ಬಗ್ಗೆ ಮಾತನಾಡುವುದು ಉದ್ಧವ್ ಠಾಕ್ರೆ ಅವರಿಗೆ ಸರಿಹೊಂದುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಎನ್‌ಸಿಪಿ ಮತ್ತು ಕಾಂಗ್ರೆಸ್ ಮೊರೆ ಹೋದಾಗ ನೈತಿಕತೆ ಮರೆತಿದ್ದರೇ? ನೈತಿಕತೆ ಆಧಾರದ ಮೇಲೆ ಠಾಕ್ರೆ ರಾಜೀನಾಮೆ ನೀಡಲಿಲ್ಲ. ಅವರೊಂದಿಗಿದ್ದ ಜನರು ಅವರನ್ನು ತೊರೆದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು ಎಂದು ತಿಳಿಸಿದರು.