ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಪ್ರಕಟ: ಶೇಕಡಾ 87.33 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಒಟ್ಟು ಶೇಕಡಾ 87.33 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ತಿರುವನಂತಪುರ ಶೇಕಡಾ 99.91 ಫಲಿತಾಂಶದೊಂದಿಗೆ ಅಗ್ರಸ್ಥಾನದಲ್ಲಿದೆ.

ಈ ಬಾರಿ ಶೇ. 90.68 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು, ಹುಡುಗರಿಗಿಂತ ಶೇ. 6.01 ರಷ್ಟು ಮುಂದಿದ್ದಾರೆ. ಅನಾರೋಗ್ಯಕರ ಸ್ಪರ್ಧೆಯನ್ನು ತಪ್ಪಿಸಲು CBSE ತನ್ನ ವಿದ್ಯಾರ್ಥಿಗಳಿಗೆ ಮೊದಲ, ಎರಡನೇ ಮತ್ತು ಮೂರನೇ ಸ್ಥಾನಗಳನ್ನು ನೀಡುವುದಿಲ್ಲ.

ಫೆಬ್ರವರಿ 15 ರಿಂದ ಏಪ್ರಿಲ್ 5, 2023 ರವರೆಗೆ ನಡೆದ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗೆ ಸುಮಾರು 39 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ಸಿಬಿಎಸ್​ಇ ಫಲಿತಾಂಶವನ್ನು cbseresults.nic.in ಅಧಿಕೃತ ವೆಬ್‌ಸೈಟ್‌ ನಲ್ಲಿ ನೋಡಬಹುದು.

Related Stories

No stories found.

Advertisement

X
Kannada Prabha
www.kannadaprabha.com