ತೆಲಂಗಾಣ: ಇಂಟರ್ಮೀಡಿಯೆಟ್ ಫಲಿತಾಂಶದಿಂದ ನೊಂದ 10 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು!
ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Published: 12th May 2023 01:25 PM | Last Updated: 12th May 2023 03:57 PM | A+A A-

ಸಾಂದರ್ಭಿಕ ಚಿತ್ರ
ಹೈದರಾಬಾದ್: ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಮಂಗಳವಾರ ಎಂ ಪ್ರಜ್ವಲ್ ಮತ್ತು ಏಪ್ರಿಲ್‌ನಲ್ಲಿ ಜಿ ಕೃಷ್ಣ ಅವರ ಆತ್ಮಹತ್ಯೆ ಸೇರಿದಂತೆ ಇಂಟರ್ಮೀಡಿಯೆಟ್ ಪರೀಕ್ಷೆಗೆ ಸಂಬಂಧಿಸಿದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ತಮ್ಮ ಇಂಟರ್ಮೀಡಿಯೆಟ್ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮತ್ತು ಫೇಲ್ ಆದ ಕಾರಣ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವರದಿಯಾದ ಪ್ರಕರಣಗಳಲ್ಲಿ, ಹೈದರಾಬಾದ್‌ನ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದರೆ, ಉಳಿದ ಘಟನೆಗಳನ್ನು ಸಂಗಾರೆಡ್ಡಿಯ ಬಿಡಿಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ವನಪರ್ತಿಯ ಕೊತಕೋಟಾ ಮತ್ತು ಜಗ್ತಿಯಾಲ್ ಜಿಲ್ಲೆಯ ಮೆಡಿಪಲ್ಲಿಯಲ್ಲಿ ದಾಖಲಾಗಿವೆ.
ಇದನ್ನು ಓದಿ: ಒಂದು ಹಂತದ ಪರೀಕ್ಷೆ ಮಾತ್ರ ನಿಮ್ಮ ಜೀವನವನ್ನು ನಿರ್ಧರಿಸುವುದಿಲ್ಲ; ನಿಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಪ್ರತಿಭೆ ಬಳಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಮೊದಲ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ಶಾಂತಿ ಕುಮಾರಿ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಎರಡನೇ ವರ್ಷದ ವಿದ್ಯಾರ್ಥಿನಿ ಹಾಗೂ ಪುಂಜಗುಟ್ಟ ನಿವಾಸಿ ಅಂಬಟಿ ಹರಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.