ಚುನಾವಣೆ ಎದುರಿಸೋಣ, ಜನರೇ ನಿರ್ಧರಿಸಲಿ: ಉದ್ಧವ್ ಠಾಕ್ರೆ
ಚುನಾವಣೆ ಎದುರಿಸೋಣ, ಯಾರು ಬೇಕೆಂದು ಜನರೇ ಅಂತಿಮ ನಿರ್ಧಾರ ಕೈಗೊಳ್ಳಲಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಬಿಜೆಪಿಗೆ ಉದ್ಧವ್ ಠಾಕ್ರೆ ಶುಕ್ರವಾರ ಸವಾಲು ಹಾಕಿದ್ದಾರೆ.
Published: 12th May 2023 11:29 AM | Last Updated: 12th May 2023 03:52 PM | A+A A-

ಉದ್ಧವ್ ಠಾಕ್ರೆ
ಮುಂಬೈ: ಚುನಾವಣೆ ಎದುರಿಸೋಣ, ಯಾರು ಬೇಕೆಂದು ಜನರೇ ಅಂತಿಮ ನಿರ್ಧಾರ ಕೈಗೊಳ್ಳಲಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಬಿಜೆಪಿಗೆ ಉದ್ಧವ್ ಠಾಕ್ರೆ ಶುಕ್ರವಾರ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಎದುರಿಸೋಣ, ಜನರೇ ನಿರ್ಧಾರ ಕೈಗೊಳ್ಳಲಿ. ಈ ಹಿಂದೆ ನಾನು ನೈತಿಕತೆಯ ಆಧಾರದ ಮೇಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಇದೀಗ ಏಕನಾಥ್ ಶಿಂಧೆಯವರೂ ಕೂಡ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಕಳೆದ ವರ್ಷ ಬಂಡಾಯ ಎದ್ದು, ನಮ್ಮ ಸರ್ಕಾರ ಉರುಳಲು ಕಾರಣರಾಗಿದ್ದ ಶಿವಸೇನೆ ಶಾಸಕರ ಅನರ್ಹತೆ ಕುರಿತು ಸ್ಪೀಕರ್ ಕಾಲಮಿತಿಯಲ್ಲಿ ನಿರ್ಧಾರ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪ್ರಸ್ತುತ ಸ್ಪೀಕರ್ ವಿದೇಶ ಪ್ರವಾಸದಲ್ಲಿದ್ದಾರೆ. ರಾಜ್ಯಕ್ಕೆ ಮರಳಿದ ಕೂಡಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ಮರಳಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆಂದು ಹೇಳಿದ್ದಾರೆ.
ಇದನ್ನೂ ಓದಿ: ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು: ಉದ್ಧವ್ ಠಾಕ್ರೆ
ದೇಶದಲ್ಲಿ ನಂಗಾ ನಾಚ್ ನಡೆಯುತ್ತಿದ್ದು, ಇದ್ದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿಲ್ಲಿಸಬೇಕು. ವಿಶ್ವದಾದ್ಯಂತ ಮಹಾರಾಷ್ಟ್ರ ರಾಜ್ಯದ ಕೆಡುತ್ತಿದೆ. ಅದನ್ನು ತಡೆಯುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕನಸ್ಸಿನಲ್ಲೂ ಏಕನಾಥ್ ಶಿಂದೆ ರಾಜೀನಾಮೆ ನೀಡುವುದಿಲ್ಲ: ಅಜಿತ್ ಪವಾರ್
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕನಸ್ಸಿನಲ್ಲಿಯೂ ರಾಜೀನಾಮೆ ನೀಡುವುದಿಲ್ಲ ಎಂದು ಎನ್ಸಿಪಿ ನಾಯಕ ಅಜಿತ್ ಪವಾರ್ ಅವರು ಶುಕ್ರವಾರ ಹೇಳಿದ್ದಾರೆ.
ನೈತಿಕತೆ ಆಧಾರದ ಮೇಲೆ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕೆಂದು ಉದ್ಧವ್ ಠಾಕ್ರೆ ಆಗ್ರಹಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಈಗಿನ ರಾಜಕೀಯ ನಾಯಕರುಗಳ ನಡುವೆ ಅಗಾಧ ವ್ಯತ್ಯಾಸವಿದೆ. ಕನಸ್ಸಿನಲ್ಲಿಯೂ ಏಕನಾಥ್ ಶಿಂಥೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.