ಕರ್ನಾಟಕದಲ್ಲಿ ಬಜರಂಗದಳ ನಿಷೇಧಕ್ಕೆ ಹೆದರುವುದಿಲ್ಲ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವುದಾಗಿ ಭರವಸೆ ನೀಡಿತ್ತು ಮತ್ತು ಈಗ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ಬಜರಂಗದಳ ನಿಷೇಧಕ್ಕೆ ಹೆದರುವುದಿಲ್ಲ ಎಂದು ವಿಶ್ವ ಹಿಂದೂ...
ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಜರಂಗದಳ ಕಾರ್ಯಕರ್ತರು ಕರ್ನಾಟಕ ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಗಳನ್ನು ಸುಟ್ಟುಹಾಕಿದ್ದರು
ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಜರಂಗದಳ ಕಾರ್ಯಕರ್ತರು ಕರ್ನಾಟಕ ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಗಳನ್ನು ಸುಟ್ಟುಹಾಕಿದ್ದರು

ಇಂದೋರ್‌: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವುದಾಗಿ ಭರವಸೆ ನೀಡಿತ್ತು ಮತ್ತು ಈಗ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿ ಬಜರಂಗದಳ ನಿಷೇಧಕ್ಕೆ ಹೆದರುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ಪದಾಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.

ಇಂದು ಇಂದೋರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಅವರು, ಹಿಂದೂಗಳ ಮೇಲಿನ ದ್ವೇಷದಿಂದ ಭಜರಂಗದಳವನ್ನು ನಿಷೇಧಿಸಿದರೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಮಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ಬಜರಂಗದಳವನ್ನು ನಿಷೇಧಿಸಲಾಗಿತ್ತು. ಆದರೆ ಅದು ತಪ್ಪು ಎಂದು ನ್ಯಾಯಾಲಯ ರದ್ದುಗೊಳಿಸಿತ್ತು ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷ ಹರಡುವ ವ್ಯಕ್ತಿಗಳು ಮತ್ತು ಪಿಎಫ್ಐ ಹಾಗೂ ಬಜರಂಗದಳದಂತಹ ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲು ಬದ್ಧ ಎಂದು ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com