ಸಾಂದರ್ಭಿಕ ಚಿತ್ರ
ದೇಶ
ತಮಿಳುನಾಡು: ನಕಲಿ ಮದ್ಯ ಸೇವಿಸಿ ಮೂವರು ಸಾವು, 11 ಮಂದಿ ಆಸ್ಪತ್ರೆಗೆ ದಾಖಲು
ತಮಿಳುನಾಡಿನ ವಿಲ್ಲುಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಕ್ಕಿಯಾರ್ಕುಪ್ಪಂನ ಮೀನುಗಾರರು ವಾಸಿಸುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಚೆನ್ನೈ: ತಮಿಳುನಾಡಿನ ವಿಲ್ಲುಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಕ್ಕಿಯಾರ್ಕುಪ್ಪಂನ ಮೀನುಗಾರರು ವಾಸಿಸುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಶನಿವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಸ್ಥಳೀಯವಾಗಿ ತಯಾರಿಸಿದ ಮದ್ಯ ಸೇವಿಸಿದ ಜನರ ಗುಂಪೊಂದು ತಡರಾತ್ರಿ ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದು, ಅವರನ್ನು ಜಿಪ್ಮೆರ್ ನ ಜವಹರ್ ಲಾಲ್ ವೈದ್ಯಕೀಯ ಕಾಲೇಜಿಗೆ ಸೇರಿಸಲಾಗಿದೆ. ಈ ಪೈಕಿ ಮೂವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಇನ್ನೂ ಹದಿನೈದು ಮಂದಿ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಬಗ್ಗೆ ದೂರು ಸ್ವೀಕರಿಸಿದ ತಕ್ಷಣ ಪೊಲೀಸರು ತನಿಖೆ ಆರಂಭಿಸಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವಿಲ್ಲುಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶ್ರೀನಾಥ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ