
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶವ್ಯಾಪಿ ವಿಪಕ್ಷಗಳಲ್ಲಿ ಚರ್ಚೆಯಾಗುತ್ತಿದೆ.
ಈ ಮಧ್ಯೆ ಎನ್ ಸಿಪಿ ನಾಯಕ ಶರದ್ ಪವಾರ್ ಅವರನ್ನು ಕಮ್ಯುನಿಸ್ಟ್ ಪಕ್ಷದ ನಾಯಕ ಡಿ. ರಾಜ ಭೇಟಿ ಮಾಡಿದ್ದು, ಕಾಂಗ್ರೆಸ್ ಗೆಲುವಿನ ಬಗ್ಗೆ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಚುನಾವಣೆ: ಎಸ್‌ಟಿ ಮೀಸಲು ಕ್ಷೇತ್ರಗಳಲ್ಲಿ ಒಂದೇ ಒಂದು ಸ್ಥಾನ ಗೆಲ್ಲಲು ಬಿಜೆಪಿ ವಿಫಲ
ಬಿಜೆಪಿಗೆ ಪರ್ಯಾಯ ನಾಯಕತ್ವ ನೀಡುವ ಬಗ್ಗೆ ಉಭಯ ನಾಯಕರೂ ಚರ್ಚಿಸಿದ್ದು, ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಶರದ್ ಪವಾರ್, ಬಿಜೆಪಿಯನ್ನು ಮಣಿಸಲು ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಬಹುದು, ಈ ನಿಟ್ಟಿನಲ್ಲಿ ಸಮಾನ ಮನಸ್ಕ ಪಕ್ಷಗಳು ಸಮಾನ ಕನಿಷ್ಠ ಯೋಜನೆ (ಸಿಎಂಪಿ) ಯನ್ನು ರಚಿಸಿಕೊಳ್ಳಬೇಕು ಎಂದು ಪವಾರ್ ತಿಳಿಸಿದ್ದಾರೆ.
ಕರ್ನಾಟಕದ ವಿಧಾನಸಭಾ ಚುನಾವಣೆ ಸ್ಪಷ್ಟವಾದ ಸಂದೇಶ ನೀಡಿದೆ. ನಾವು ಕರ್ನಾಟಕದಂತಹ ವಾತಾವರಣವನ್ನು ದೇಶದ ಇತರ ರಾಜ್ಯಗಳಲ್ಲೂ ಸೃಷ್ಟಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕರ್ನಾಟಕದಲ್ಲಿ ಬಿಜೆಪಿಗೆ ಕಾಂಗ್ರೆಸ್ ಒಂದೇ ಪರ್ಯಾಯವಾಗಿ ನಿಂತಿತು. ಆದರೆ ಬೇರೆ ರಾಜ್ಯಗಳಲ್ಲಿ ಸಮಾನ ಮನಸ್ಕ ಪಕ್ಷಗಳು ಸಮಾನ ಕನಿಷ್ಠ ಯೋಜನೆ (ಸಿಎಂಪಿ) ಯನ್ನು ರಚಿಸಿಕೊಳ್ಳಬೇಕು ಎಂದು ಶರದ್ ಪವಾರ್ ಹೇಳಿದ್ದಾರೆ.