ಸೋತಾಗ ಬಿಜೆಪಿ ಅಪಮಾನ ಎಂದುಕೊಳ್ಳುತ್ತದೆ, ಸುಳ್ಳಿನ ಕಾರ್ಖಾನೆಗಳು ಅತ್ಯಂತ ಕ್ರಿಯಾಶೀಲವಾಗಿವೆ: ಕಾಂಗ್ರೆಸ್

ಚುನಾವಣೆಯಲ್ಲಿ ಸೋತ ಬಿಜೆಪಿಗೆ ಅಪಮಾನವಾಗಿದೆ ಮತ್ತು ಪ್ರತಿಸ್ಪರ್ಧಿ ಪಕ್ಷವು ಸಾಮಾಜಿಕ ಸಾಮರಸ್ಯವನ್ನು ಕದಡಲು ದುಷ್ಕೃತ್ಯದ ಪ್ರಯತ್ನಗಳನ್ನು ಮಾಡುತ್ತಿದೆ. ದ್ವೇಷ ಉತ್ಪಾದಿಸುವ ಕಾರ್ಖಾನೆಗಳು ಹೈಪರ್‌ ಆ್ಯಕ್ಟಿವ್ ಆಗಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್
ಕಾಂಗ್ರೆಸ್

ನವದೆಹಲಿ: ಚುನಾವಣೆಯಲ್ಲಿ ಸೋತ ಬಿಜೆಪಿಗೆ ಅಪಮಾನವಾಗಿದೆ ಮತ್ತು ಪ್ರತಿಸ್ಪರ್ಧಿ ಪಕ್ಷವು ಸಾಮಾಜಿಕ ಸಾಮರಸ್ಯವನ್ನು ಕದಡಲು ದುಷ್ಕೃತ್ಯದ ಪ್ರಯತ್ನಗಳನ್ನು ಮಾಡುತ್ತಿದೆ. ದ್ವೇಷ ಉತ್ಪಾದಿಸುವ ಕಾರ್ಖಾನೆಗಳು ಹೈಪರ್‌ ಆ್ಯಕ್ಟಿವ್ ಆಗಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕರ್ನಾಟಕ ವಕ್ಫ್ ಬೋರ್ಡ್ ಮುಖ್ಯಸ್ಥ ಶಫಿ ಸಾದಿ ಅವರು ರಾಜ್ಯದಲ್ಲಿ ಮುಸ್ಲಿಂ ಉಪಮುಖ್ಯಮಂತ್ರಿ ನೇಮಕ ಮಾಡಬೇಕು ಎಂದು ಒತ್ತಾಯಿಸಿದ ನಂತರ ಬಿಜೆಪಿ ಸೋಮವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತ್ತು. ಈ ವಿಚಾರವಾಗಿ ಇದೀಗ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಬಿಜೆಪಿ ಗೆದ್ದಾಗ ಗೆಲುವನ್ನು ನಮ್ರತೆಯಿಂದ ಸ್ವೀಕರಿಸುವುದಿಲ್ಲ ಮತ್ತು ಸೋತಾಗ ಅವರು ಅವಮಾನಕರ ರೀತಿಯಲ್ಲಿ ವರ್ತಿಸುತ್ತಾರೆ. ಇದೀಗ ಕರ್ನಾಟಕದಲ್ಲಿನ ಹೀನಾಯ ಸೋಲಿಗೆ ಬಿಜೆಪಿ ಹೇಗೆ ಪ್ರತಿಕ್ರಿಯಿಸುತ್ತಿದೆ ಎಂಬುದನ್ನಷ್ಟೇ ಹೇಳಬೇಕು' ಎಂದಿದ್ದಾರೆ.

ದ್ವೇಷ ಮತ್ತು ವಿಷವನ್ನು ತಯಾರಿಸುವ ಕಾರ್ಖಾನೆಗಳು ಅತಿ ಕ್ರಿಯಾಶೀಲವಾಗಿವೆ. ಕರ್ನಾಟಕದ ಜನರು ಬುದ್ಧಿವಂತರು ಮತ್ತು ಅವರು ಎಚ್ಚೆತ್ತುಕೊಂಡು ಸಾಮಾಜಿಕ ಸಾಮರಸ್ಯವನ್ನು ಕದಡುವ ಬಿಜೆಪಿಯ ದುಷ್ಟ ಪ್ರಯತ್ನಗಳನ್ನು ಸೋಲಿಸಿದ್ದಾರೆ ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಫಿ ಸಾದಿ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. 

ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಉಪಮುಖ್ಯಮಂತ್ರಿ ಮುಸ್ಲಿಂ ಆಗಿರಬೇಕು: ವಕ್ಫ್ ಬೋರ್ಡ್ ಮುಖ್ಯಸ್ಥ ಶಫಿ ಸಾದಿ... 15 ಕ್ಷೇತ್ರಗಳಲ್ಲಿ ನಮಗೆ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು. ಈ ಪೈಕಿ 9 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ. 

ಮುಸಲ್ಮಾನರಿಂದಲೇ ಸುಮಾರು 72 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಒಂದು ಸಮುದಾಯವಾಗಿ ನಾವು ಕಾಂಗ್ರೆಸ್‌ಗೆ ಸಾಕಷ್ಟು ಕೊಟ್ಟಿದ್ದೇವೆ. ಈಗ ನಾವು ಪ್ರತಿಯಾಗಿ ಏನನ್ನಾದರೂ ಪಡೆಯುವ ಸಮಯ. ಮುಸ್ಲಿಂ ಉಪಮುಖ್ಯಮಂತ್ರಿ ಮತ್ತು ಗೃಹ, ಕಂದಾಯ ಮತ್ತು ಶಿಕ್ಷಣದಂತಹ ಉತ್ತಮ ಖಾತೆಗಳನ್ನು ಹೊಂದಿರುವ ಐದು ಮಂತ್ರಿಗಳು ನಮಗೆ ಬೇಕು. ಇದರೊಂದಿಗೆ ನಮಗೆ ಧನ್ಯವಾದ ಹೇಳುವುದು ಕಾಂಗ್ರೆಸ್‌ನ ಜವಾಬ್ದಾರಿಯಾಗಿದೆ.

ಕಾಂಗ್ರೆಸ್ ಜಾತ್ಯತೀತತೆಗೆ ಬೆಲೆ ಬಂದಿದೆ. ಕಾಂಗ್ರೆಸ್ ತನ್ನ ಬದ್ಧತೆಗಳನ್ನು ಮೀರಿದೆ ಎಂದು ತೋರುತ್ತಿದೆ, ಅವರು ಎಂದಿಗೂ ಗೆಲ್ಲುವುದಿಲ್ಲ ಎಂದು ಭಾವಿಸಿದ್ದರು. ಆದರೆ, ದುರದೃಷ್ಟವಶಾತ್ ಅವರ ಯೋಜನೆಗಳು ತಪ್ಪಾಗಿದೆ ಎಂದು ಮಾಳವಿಯಾ ಅವರು ಶಫಿ ಸಾದಿ ಅವರ ಹೇಳಿಕೆಯನ್ನು ಸೇರಿಸಿ ಟ್ವೀಟ್ ಮಾಡಿದ್ದಾರೆ.

ಮಾಳವಿಯಾಗೆ ತಿರುಗೇಟು ನೀಡಿದ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, 'ನೀವು ನಕಲಿ ಮಾಡುವ ಅಗತ್ಯವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ಇದು ಸ್ವಲ್ಪ ಹೆಚ್ಚಾಯಿತು. ಶಫಿ ಸಾದಿ ಅವರಿಗೆ ಬಿಜೆಪಿಯ ಬೆಂಬಲವಿದೆ' ಎಂದಿದ್ದಾರೆ.

ಮೇ 10 ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ) ಕ್ರಮವಾಗಿ 66 ಮತ್ತು 19 ಸ್ಥಾನಗಳನ್ನು ಗಳಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com