ಮಹಾರಾಷ್ಟ್ರದಲ್ಲಿ ಕರ್ನಾಟಕ ಚುನಾವಣೆ ಗೆಲುವಿನ ಸಂಭ್ರಮಾಚರಣೆ: ಮಹಾ ವಿಕಾಸ್ ಆಘಾಡಿ ಪಕ್ಷಗಳ ವಿರುದ್ಧ ಫಡ್ನವೀಸ್ ಕಿಡಿ
ರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಮಹಾ ವಿಕಾಸ್ ಆಘಾಡಿ ಪಕ್ಷಗಳು ಮಹಾರಾಷ್ಟ್ರದಲ್ಲಿ ಸಂಭ್ರಮಾಚರಣೆ ಆಚರಿಸುತ್ತಿರುವುದಕ್ಕೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದು, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ರಾಜ್ಯದಿಂದ ಎಲ್ಲಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.
Published: 16th May 2023 10:40 AM | Last Updated: 16th May 2023 10:44 AM | A+A A-

ಮಹಾ ವಿಕಾಸ್ ಆಘಾಡಿ ನಾಯಕರು
ಮುಂಬೈ: ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಮಹಾ ವಿಕಾಸ್ ಆಘಾಡಿ ಪಕ್ಷಗಳು ಮಹಾರಾಷ್ಟ್ರದಲ್ಲಿ ಸಂಭ್ರಮಾಚರಣೆ ಆಚರಿಸುತ್ತಿರುವುದಕ್ಕೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದು, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ರಾಜ್ಯದಿಂದ ಎಲ್ಲಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ವಿಜಯವನ್ನು ಶ್ಲಾಘಿಸಿದ್ದಕ್ಕಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಶಿವಸೇನೆ (ಯುಬಿಟಿ) ಸೇರಿದಂತೆ ಮಹಾ ವಿಕಾಸ್ ಅಘಾಡಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಫಡ್ನವೀಸ್, ಎಂವಿಎ ಪಕ್ಷಗಳು ಮಾಡಬಹುದಾದದ್ದು ಇಷ್ಟೇ ಎಂದು ಹೇಳಿದರು.
ಇದನ್ನೂ ಓದಿ: ಕರ್ನಾಟಕ ಮಾದರಿ ಬೇರೆ ಕಡೆಯಲ್ಲೂ ಪ್ರಯೋಗಿಸಬಹುದು: ಪವಾರ್
ಕರ್ನಾಟಕ ಚುನಾವಣೆಯಲ್ಲಿ ನಾವು ಸೋತಿದ್ದೇವೆ ಆದರೆ ನಮ್ಮ ಮತಗಳ ಪ್ರಮಾಣ ಕಡಿಮೆಯಾಗಲಿಲ್ಲ. ಜೆಡಿಎಸ್ ಮತಗಳು ಕಡಿಮೆಯಾದರಿಂದ ಕಾಂಗ್ರೆಸ್‌ಗೆ ಲಾಭವಾಯಿತು. ಆದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
"ಕಾಂಗ್ರೆಸ್ ಗೆದಿದ್ದಕ್ಕೆ ಎನ್‌ಸಿಪಿ ಮತ್ತು ಸೇನಾ (ಯುಬಿಟಿ) ಏಕೆ ಸಂಭ್ರಮಪಡುತ್ತಿವೆ ಎಂಬುದು ಅರ್ಥವಾಗುತ್ತಿಲ್ಲ. ಅವರು ಮಾಡಬಹುದಾದುದು ಇಷ್ಟೇ. ಬಿಜೆಪಿ-ಸೇನಾ ಮರು ಆಯ್ಕೆಯಾಗುವುದರಿಂದ (ಮಹಾರಾಷ್ಟ್ರದಲ್ಲಿ) ಸರ್ಕಾರ ರಚಿಸುವ ಮಹಾ ವಿಕಾಸ್ ಅಘಾಡಿ ಅವರ ಕನಸು ಎಂದಿಗೂ ನನಸಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿದ ನಂತರ ವಿವಿಧ ರಾಜಕೀಯ ಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸುತ್ತಿವೆ.